ಮೈಸೂರು-ಬೆಂಗಳೂರು ಎಕ್ಸ್‍ಪ್ರೆಸ್ ಹೈವೇಯಲ್ಲಿ ಆಟೋ ಸ್ಕೂಟರ್ ಸಂಚಾರ ಇಲ್ಲ

ಮೈಸೂರು: ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಸಂಚರಿಸಲು ಆಟೋ ಮತ್ತು ದ್ವಿಚಕ್ರ ವಾಹನಗಳಿಗೆ ಅವಕಾಶ ಇಲ್ಲ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೈಸೂರು-ಬೆಂಗಳೂರು ದಶಪಥ ಕಾಮಗಾರಿಯನ್ನು ವೀಕ್ಷಿಸಿ ಉತ್ತಮವಾಗಿದೆ ಎಂದು ಹೇಳಿದ್ದಾರೆ. ಫೆಬ್ರವರಿ ಅಥವಾ ಮಾರ್ಚ್ ಗೆ ಈ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು  ಉದ್ಘಾಟನೆ ಮಾಡುವರು ಎಂದು ಹೇಳಿದರು.
ಇದು ಎಕ್ಸ್‍ಪ್ರೆಸ್ ಹೈವೆ ಆಗಿರುವುದರಿಂದ ಬಹಳಷ್ಟು ಮಂದಿ ಮೈಸೂರು-ಬೆಂಗಳೂರು ನಡುವೆ ವೇಗವಾಗಿ ಸಂಚರಿಸುತ್ತಿರುತ್ತಾರೆ. ಈ ಮಧ್ಯೆ ಇಲ್ಲಿ ಆಟೋ ಮತ್ತು ದ್ವ್ವಿಚಕ್ರ ವಾಹನಗಳಿಗೆ ಅವಕಾಶ ನೀಡಿದರೆ ಅವರ ವೇಗದ ಮಿತಿ ಕಡಿಮೆಯಾಗಬಹುದು ಎಂದು ತಿಳಿಸಿದರು.
ಎಕ್ಸ್‍ಪ್ರೆಸ್ ಹೈವೆಯಲ್ಲಿ ಸಂಚರಿಸುವ ವಾಹನಗಳಿಗೆ ಟೋಲ್ ಸಂಗ್ರಹ ಮಾಡಲಾಗುತ್ತದೆ. 1.30 ಗಂಟೆಯಲ್ಲಿ ಬೆಂಗಳೂರಿನಿಂದ ಮೈಸೂರು ತಲುಪಬಹುದು. ಹಾಗಂತ ಈ ರಸ್ತೆ ಬರಿ ಶ್ರೀಮಂತರಿಗಾಗಿ ಎಂದು ಭಾವಿಸಬಾರದು ಎಂದರು . 
ದ್ವಿ ಚಕ್ರ ವಾಹನಗಳು ಮತ್ತು ಇತರೆ ವಾಹನಗಳು ಸಂಚರಿಸಲು ಸರ್ವೀಸ್ ರಸ್ತೆಗಳಿರುತ್ತದೆ. ಆ ಮೂಲಕ ಸಂಚರಿಸಬಹುದು ಎಂದು ಹೇಳಿದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು