ಕಾಂಗ್ರೆಸ್, ಜೆಡಿಎಸ್ ಮಣಿಸಲು ಕುಲದೈವ ಭೂತರಾಜರ ಸನ್ನಿಧಿಯಲ್ಲಿ ಕಟೀಲ್ ವಿಶೇಷ ಪೂಜೆ

ಒಕ್ಕಲಿಗ ಮುಖಂಡ, ಚಾಮುಂಡೇಶ್ವರಿ ಟಿಕೆಟ್ ಆಕಾಂಕ್ಷಿ ನಾಗನಹಳ್ಳಿ ಜಗದೀಶ್ ಗೌಡ ಭಾಗಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದರೆ ಬಳಿಯ ಕೆಲ್ಲು ಪತ್ತಿಗೆ ಗ್ರಾಮದಲ್ಲಿರುವ ಶ್ರೀ ಭೂತರಾಜರ ಸನ್ನಿಧಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಶೇಷ ಪೂಜೆ ಸಲ್ಲಿಸಿ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಣಿಸಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿ ಎಂದು ಪ್ರಾರ್ಥಿಸಿದರು.
ಶ್ರೀ ಭೂತರಾಜ ದೈವ ಕಟೀಲ್ ಅವರ ಕುಲದೈವವಾಗಿದ್ದು, ಇಷ್ಟಾರ್ಥ ಸಿದ್ಧಿಗಾಗಿ ಅವರು ತಮ್ಮ ಕುಲ ದೇವರಲ್ಲಿ ಪ್ರಾರ್ಥಿಸುವುದು ವಾಡಿಕೆಯಾಗಿದೆ. 2023ರ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಬೇಕು ಎಂದು ನಳೀನ್ ಕುಮಾರ್ ಕಟೀಲ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಹಾಜರಿದ್ದ ಒಕ್ಕಲಿಗ ಸಮುದಾಯದ ನಾಯಕ ನಾಗನಹಳ್ಳಿ ಜಗದೀಶ್ ಗೌಡ ಅವರು ಕೂಡ ಬಿಜೆಪಿ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಹಾಗೂ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದರೆ ಬಳಿಯ ಕೆಲ್ಲು ಪತ್ತಿಗೆ ಗ್ರಾಮದಲ್ಲಿರುವ ಶ್ರೀ ಭೂತರಾಜರ ಸನ್ನಿಧಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಶೇಷ ಪೂಜೆ ಸಲ್ಲಿಸಿ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಣಿಸಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿ ಎಂದು ಪ್ರಾರ್ಥಿಸಿದರು. 
ಶ್ರೀ ಭೂತರಾಜ ದೈವ ಕಟೀಲ್ ಅವರ ಕುಲದೈವವಾಗಿದ್ದು, ಇಷ್ಟಾರ್ಥ ಸಿದ್ಧಿಗಾಗಿ ಅವರು ತಮ್ಮ ಕುಲ ದೇವರಲ್ಲಿ ಪ್ರಾರ್ಥಿಸುವುದು ವಾಡಿಕೆಯಾಗಿದೆ. 2023ರ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಬೇಕು ಎಂದು ನಳೀನ್ ಕುಮಾರ್ ಕಟೀಲ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಹಾಜರಿದ್ದ ಒಕ್ಕಲಿಗ ಸಮುದಾಯದ ನಾಯಕ ನಾಗನಹಳ್ಳಿ ಜಗದೀಶ್ ಗೌಡ ಅವರು ಕೂಡ ಬಿಜೆಪಿ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಹಾಗೂ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು