ಬೈಕ್-ಗೂಡ್ಸ್ ಟೆಂಪೋ ಮುಖಾಮುಖಿ ಡಿಕ್ಕಿ: ಪಿಡಿಓ ಸ್ಥಿತಿ ಗಂಭೀರ
ಜನವರಿ 26, 2023
ಶಾರುಕ್ ಖಾನ್, ಹನೂರು
ಹನೂರು : ಗೂಡ್ಸ್ ಟೆಂಪೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ದಿನ್ನಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಸೋಮಶೇಖರ್ ಸ್ಥಿತಿ ಗಂಭಿರವಾಗಿದೆ. ದಿನ್ನಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗಣ ರಾಜ್ಯೋತ್ಸವ ಕಾರ್ಯಕ್ರಮ ಮುಗಿಸಿ ಚಾಮರಾಜನಗರದಲ್ಲಿ ನಡೆಯುವ ಅಧಿಕಾರಿಗಳ ಸಭೆಗೆ ತೆರಳಲು ಬೈಕ್‍ನಲ್ಲಿ ಹನೂರಿಗೆ ವಾಪಸ್ಸಾಗುತ್ತಿದ್ದ ವೇಳೆ ಎದುರಿನಿಂದ ಬಂದ ಕೋಳಿ ಸಾಗಾಣಿಕೆ ಗೂಡ್ಸ್ ಟೆಂಪೋ ಬೈಕ್‍ಗೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಸೋಮಶೇಖರ್ ಅವರನ್ನು ರಾಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಕಳಿಸಲಾಗಿದೆ.
0 ಕಾಮೆಂಟ್‌ಗಳು