ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ಕೊಡುವಂತೆ ಡಿಸಿಸಿ ಬ್ಯಾಂಕ್ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಸೂಚನೆ
ಜನವರಿ 05, 2023
ಮೈಸೂರು: ರೈತರ ಅಭಿವೃದ್ದಿಯ ಹಿತದೃಷ್ಟಿಯಿಂದ ಒಂದು ಎಕರೆ ವ್ಯವಸಾಯಕ್ಕೆ ತಗಲುವ ವೆಚ್ಚವನ್ನು ಲೆಕ್ಕಾಚಾರ ಮಾಡಿ, ಮೈಸೂರು ಚಾಮರಾಜನಗರ ಜಿಲ್ಲೆಗಳ ರೈತರಿಗೆ 2023-24 ನೇ ಸಾಲಿಗೆ ಶೂನ್ಯ ಬಡ್ಡಿ ದರದಲ್ಲಿ ಕಳೆದ ಸಾಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡಿ ಎಂದು ಮೈಸೂರು ಮತ್ತು ಚಾಮರಾಜನಗರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ 2023-24 ನೇ ಸಾಲಿನ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಸಭೆ(ಡಿ.ಎಲ್.ಟಿ.ಸಿ)ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2023-24 ನೇ ಸಾಲಿಗೆ ವಿವಿಧ ಬೆಳೆಗಳಿಗೆ ಕೃಷಿ ವೆಚ್ಚಗಳ ದರ ಪಟ್ಟಿಯನ್ನು ನಿಗದಿಪಡಿಸಲು ಕೃಷಿ, ರೇμÉ್ಮ, ತೋಟಗಾರಿಕೆ, ಮೀನುಗಾರಿಕೆ, ಪಶು ಸಂಗೋಪನಾ ಇಲಾಖೆಯವರ ಶಿಫಾರಸ್ಸಿನ ಮೊತ್ತವನ್ನು ಗಣನೆಗೆ ತೆಗೆದುಕೊಂಡು, ಸಭೆಯಲ್ಲಿ ಹಾಜರಿದ್ದ ಕೃಷಿ ತಜ್ಞರು ಹಾಗೂ ಪ್ರಗತಿಪರ ರೈತರ ಸಲಹೆಗಳನ್ನು ಆಲಿಸಿದರು. ಸಭೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಸಿ ಜನಾರ್ಧನ್, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಂ.ಟಿ ಶಶಿಧರ್, ಸಾಲದ ವಿಭಾಗದ ಮುಖ್ಯಸ್ಥ ಕೆ. ರವಿ ಅವರು ಯೋಜನೆ ಮತ್ತು ಅಭಿವೃದ್ದಿ ವಿಭಾಗದ ಮುಖ್ಯಸ್ಥ ಅಜ್ಮತ್ ಪಾಷ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೇ ಇಲಾಖೆ, ಪಶುಪಾಲನೆ ಮತ್ತು ಮೀನುಗಾರಿಕೆ ಇಲಾಖಾಧಿಕಾರಿಗಳು ಹಾಗೂ ಪ್ರಗತಿಪರ ರೈತ ಸದಸ್ಯರು ಸಭೆಯಲ್ಲಿ ಹಾಜರಿದ್ದರು.
0 ಕಾಮೆಂಟ್‌ಗಳು