ಗುಂಡು ಹೊಡೆದುಕೊಂಡು ಯುವಕ‌ ಆತ್ಮಹತ್ಯೆ

ಸೋಮವಾರಪೇಟೆ: ಯುವಕನೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ.
26 ವರ್ಷದ ನಾಪಂಡ ರಾಜೇಶ್ ಎಂಬ ಯುವಕ ಕಾಫಿ ತೋಟದಲ್ಲಿ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜೇಶ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು