ಸುತ್ತೂರು: ಚಿರತೆ ಸೆರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುತ್ತೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಚಿರತೆ ದಾಳಿಯಿಂದ ತಾಲ್ಲೂಕಿನಲ್ಲಿ ನಾಲ್ಲು ಸಾವುಗಳು ಉಂಟಾಗಿದ್ದು ಬೇಸರ ತಂದಿದೆ. ಕೂಂಬಿಂಗ್ ಕಾರ್ಯಕ್ಕೆ ಅಗತ್ಯ ಸಿಬ್ಬಂದಿ ಸಲಕರಣೆ ನೀಡಲಾಗುವುದು. ಚಿರತೆ ಹೆಚ್ಚಾಗಿರುವ ಗ್ರಾಮದಲ್ಲಿ ಗಸ್ತು ಹೆಚ್ಚಿಸುತ್ತೇವೆ. ಸಂಜೆ ವೇಳೆ ಮನೆಯಿಂದ ಹೊರಕ್ಕೆ ಬಾರದಂತೆ ಗ್ರಾಮದ ಜನರಿಗೆ ತಿಳಿವಳಿಕೆ ನೀಡಲಾಗುವುದು. ಸಂತ್ರಸ್ತ ಕುಟುಬಕ್ಕೆ ಪರಿಹಾರ ನೀಡಲಾಗುವುದು ಎಂದರು.
0 ಕಾಮೆಂಟ್‌ಗಳು