ಜಿಂಕೆ ಬೇಟೆ: ಕಾಡಿನಲ್ಲಿ ಬೇಟೆಗಾರರು, ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ

ವರದಿ: ಶಾರುಕ್ ಖಾನ್, ಹನೂರು 
ಹನೂರು : ವೀರಪ್ಪನ್ ಅಳಿದ ಬಳಿಕವೂ ಹನೂರು ತಾಲೂಕಿನ ಗೋಪಿನಾಥಂ, ಪಾಲಾರ್ ಸುತ್ತಮುತ್ತಲಿನ ಕಾಡಿನಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 
ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಬರುವ ಪಾಲಾರ್ ಎಂಬಲ್ಲಿ ಜಿಂಕೆ ಬೇಟೆಯಾಡಿ ತೆರಳುತ್ತಿದ್ದ ಅಂದಾಜು ನಾಲ್ವರು ಕಳ್ಳ ಬೇಟೆಗಾರರು ಹಾಗೂ ಮೂವರು ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯ ಕಣ್ತಪ್ಪಿಸಿ ಕಳ್ಳ ಬೇಟೆಗಾರರು ನದಿಗೆ ಹಾರಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಬೇಟೆಗಾರರು ತಲೆ ಮೇಲೆ ಅಳವಡಿಸಿಕೊಂಡಿದ್ದ ಕ್ಯಾಪ್ ಟಾರ್ಚ್‍ಗಳು ಪತ್ತೆಯಾಗಿದೆ. ಈ ಘಟನೆ ಬಗ್ಗೆ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. 
ದೂರು ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆ ಬಗ್ಗೆ ಎಸಿಎಫ್ ಅಂಕರಾಜು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು