ಶಾರುಕ್ ಖಾನ್, ಹನೂರು ಮಹದೇಶ್ವರಬೆಟ್ಟ : ಹನೂರು ತಾಲ್ಲೂಕು ಮಹದೇಶ್ವರಬೆಟ್ಟದ ಪೆಟ್ರೋಲ್ ಬಂಕ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿವೋಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಮೃತರನ್ನು ಹನೂರು ತಾಲೂಕಿನ ಮಧುವನಹಳ್ಳಿ ಗ್ರಾಮದ ಕುಮಾರ್(45) ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ ಮೂವರು ಹೆಣ್ಣು ಮಕ್ಕಳು ಇದ್ದಾರೆ. ಮೃತ ಕುಮಾರ್ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಪೆಟ್ರೋಲ್ ಬಂಕ್‍ನಲ್ಲಿ 15 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.
0 ಕಾಮೆಂಟ್‌ಗಳು