ಗುರುಚರಣ್ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ : ಮಧು ಮಾದೇಗೌಡ .

ಟಿ.ಬಿ.ಸಂತೋಷ, ಮದ್ದೂರು
ಮದ್ದೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಗುರುಚರಣ್ ಅವರು ಕಾಂಗ್ರೆಸ್ ಪಕ್ಷರ ಅಭ್ಯರ್ಥಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಹೇಳಿದರು.
ಫೆಬ್ರವರಿ 11 ರಂದು ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ  ಆಯೋಜಿಸಿರುವ "ಪ್ರಜಾಧ್ವನಿ ಯಾತ್ರೆ"  ಕಾರ್ಯಕ್ರಮದ  ಹಿನ್ನೆಲೆಯಲ್ಲಿ ಕೆ.ಎಂ..ದೊಡ್ಡಿಯ ಭಾರತಿ ಕಾಲೇಜು ಆವರಣದಲ್ಲಿ ಏರ್ಪಡಿದ್ದ ಚಿಕ್ಕರಸಿನಕೆರೆ ಹೋಬಳಿಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದಿಂದ ಗುರುಚರಣ್ ಅವರನ್ನು ಸಂಬಾವ್ಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ಹೈಕಮಾಂಡ್‍ಗೆ ಕಳುಹಿಸಲಾಗಿದೆ. ಪಕ್ಷದ ಕಾರ್ಯಕರ್ತರು, ಮತದಾರ ಬಂಧುಗಳು ಯಾವುದೇ ಗೊಂದಲಗಳಿಗೆ ಕಿವಿಗೊಡದೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು. 
ಮುಂದೆ ಕಾಂಗ್ರೆಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದನ್ನು ಯಾರಿಂದಲು ತಪ್ಪಿಸಲು ಸಾಧ್ಯವಿಲ್ಲ.  ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಬಿಜೆಪಿಯ ಭ್ರμÁ್ಟಚಾರ, ದುರಾಡಳಿತದಿಂದ ಬೇಸತ್ತು ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷದ ಅಡಳಿತ ಬಯಸುತ್ತಿದೆ ಎಂದರು.
ಮದ್ದೂರಿನಲ್ಲಿ ನಡೆಯುವ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮಕ್ಕೆ ಸುಮಾರು 20 ಸಾವಿರಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಚಿಕ್ಕರಸಿನಕೆರೆ ಹೋಬಳಿಯಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು. 
ಕೆಪಿಸಿಸಿ ಸದಸ್ಯ ಗುರುಚರಣ್ ಮಾತನಾಡಿ, ಕಳೆದ 25 ವರ್ಷಗಳಿಂದ ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ  ಕಾಂಗ್ರೆಸ್ ಪಕ್ಷದ ಮುಖಂಡರುಗಳು  ಕಾರ್ಯಕರ್ತರು ಭಿನ್ನಾಭಿಪ್ರಾಯಗಳನ್ನು ಮರೆತು  ಬೂತ್ ಮಟ್ಟದಲ್ಲಿ  ಪಕ್ಷ ಸಂಘಟಿಸಿ  ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದರು. 
ಮುಖಂಡರಾದ ಚಂದೂಪುರ ಪಾಪಣ್ಣ, ಆಶಯ್ ಮಧು ಮಾದೇಗೌಡ, ಕೃಷ್ಣ, ವೀಣಾ ಶಂಕರ್, ಸೌಮ್ಯಾ ಪುಟ್ಟಸ್ವಾಮಿ, ಬಿ.ಎಂ.ನಂಜೇಗೌಡ, ಅಜ್ಜಹಳ್ಳಿ ರಾಮಕೃಷ್ಣ, ಗುರುದೇವರಹಳ್ಳಿ ಸಿದ್ದೇಗೌಡ ಮುಂತಾದವರು ಉಪಸ್ಥಿತರಿದ್ದರು. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು