ಶಾರೂಕ್ ಖಾನ್, ಹನೂರು
ಹನೂರು ; ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ
ಪಟ್ಟಣದ ಹೊರವಲಯದ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೈಸೂರು ಜಿಲ್ಲೆಯ ವಡ್ಡರದೊಡ್ಡಿ ಗ್ರಾಮದ ಸಿದ್ದಪ್ಪ ಸಾವನಪ್ಪಿದ ವ್ಯಕ್ತಿ.
ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಹನೂರಿಗೆ ಬೈಕ್ ನಲ್ಲಿ ಮರಳುತ್ತಿದ್ದಾಗ
ನಿರ್ಮಾಣವಾಗುತ್ತಿರುವ ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರೂ ಕೆಳಗೆ ಬಿದ್ದರು. ಈ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಸಿದ್ದಪ್ಪ ಅವರ ತಲೆಗೆ ತೀವ್ರ ಪೆಟ್ಟಾಗಿ ಅವರು ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಹನೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
0 ಕಾಮೆಂಟ್‌ಗಳು