ರಾಜ್ಯ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು (2ಬಿ) ರದ್ದು ಪಡಿಸಿರುವುದನ್ನು ವಿರೋಧಿಸಿ ನಾಳೆ ಎಸ್‍ಡಿಪಿಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಮಾರ್ಚ್ 25, 2023
ಮೈಸೂರು: ಅಲ್ಪ ಸಂಖ್ಯಾತ ಮುಸ್ಲಿಂ ಜನಾಂಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗ ನೀಡುವಲ್ಲಿ ಇದುವರೆಗಿನ ಸರ್ಕಾರಗಳು ನಿಗದಿ ಮಾಡಿದ್ದ ಶೇಕಡಾ 4 ರಷ್ಟು ಮೀಸಲಾತಿಯನ್ನು ಆಡಳಿತರೂಢ ಬಿಜೆಪಿ ಸರ್ಕಾರ ಏಕಾಏಕಿ ರದ್ದು ಮಾಡಿರುವುದನ್ನು ವಿರೋಧಿಸಿ ನಾಳೆ (ಭಾನುವಾರ ಸಂಜೆ 4 ಗಂಟೆಗೆ) ನಗರದ ಸಂತ ಫಿಲೋಮಿನಾ ಚರ್ಚ್ ವೃತ್ತದಲ್ಲಿ ಎಸ್‍ಡಿಪಿಐ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲಿವೆ. ಪ್ರತಿಭಟನೆಯಲ್ಲಿ ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಉಪಾಧ್ಯಕ್ಷ ಪುಟ್ಟನಂಜಯ್ಯ, ಮೈಸೂರು ಜಿಲ್ಲಾಧ್ಯಕ್ಷ ರಫತ್ ಖಾನ್ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ರಫತ್ ಖಾನ್ ಪ್ರಕರಣೆಯಲ್ಲಿ ತಿಳಿಸಿದ್ದಾರೆ.
0 ಕಾಮೆಂಟ್‌ಗಳು