ಮೈಸೂರು: ಅಲ್ಪಸಂಖ್ಯಾತ ಮುಸಲ್ಮಾನರಿಗೆ ಮೀಸಲಾಗಿದ್ದ ಶೇ,4 2ಬಿ ಮೀಸಲಾತಿಯನ್ನು ಕಾನೂನು ಬಾಹಿರವಾಗಿ ರದ್ದುಪಡಿಸಿ ಅದನ್ನು ಒಕ್ಕಲಿಗರು ಮತ್ತು ಲಿಂಗಾಯತಿಗೆ ತಲಾ 2 ಪರ್ಸೆಂಟ್ ಹಂಚುವ ಮೂಲಕ ಬಿಜೆಪಿ ಸರ್ಕಾರ ಮೂರು ಸಮುದಾಯಕ್ಕೂ ದ್ರೋಹ ಮಾಡಿದ್ದು ಈಗ ಬಟಾ ಬಯಲಾಗಿದೆ. ಇದು ಡಬಲ್ ಇಂಜಿನ್ ಸರ್ಕಾರದ ಮಹಾ ಮೋಸ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ವಾಗ್ದಾಳಿ ನಡೆಸಿದರು.
ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಒಕ್ಕಲಿಗ ಮತ್ತು ಲಿಂಗಾಯತರಿಗೆ ಬಿಜೆಪಿ ಲಾಲಿಪಾಪ್ ಕೊಟ್ಟಿದೆ ಎಂದು ಕಾಂಗ್ರೆಸ್ ಸದಾ ಹೇಳುತಿತ್ತು. ಚುನಾವಣೆವರೆಗೂ ಮಾತ್ರ ಈ ಸುಳ್ಳು ಭರವಸೆ ಕೊಡುವುದಾಗಿತ್ತು. ಇದೀಗ ಸುಪ್ರೀಂಕೋರ್ಟ್‍ನಲ್ಲಿ ಬಿಜೆಪಿ ವಂಚನೆ ಬಯಲಾಗಿದೆ ಎಂಧು ಸುರ್ಜೇವಾಲ ಕಿಡಿ ಕಾರಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿ ಸರ್ಕಾರ ಒಕ್ಕಲಿಗರು, ಲಿಂಗಾಯತರಿಗೆ ಚಾಕಲೇಟ್ ನೀಡಿ ಮುಸಲ್ಮಾನರಿಗೆ ದ್ರೋಹ ಮಾಡಿದ್ದು ಒಂದೆಡೆಯಾದರೇ, ಎಸ್‍ಸಿ, ಎಸ್‍ಟಿ ಮೀಸಲಾಗಿ ಹೆಚ್ಚಳ ಮಾಡಿದ್ದಾಗಿ ಹೇಳಿದೆ. ಆದರೇ, ಕೇಂದ್ರ ಸರ್ಕಾರ ಈ ಪ್ರಸ್ತಾವನೆಯನ್ನು ಸಾರಾ ಸಗಟಾಗಿ ತಿರಸ್ಕರಿಸಿದೆ. ಇದನ್ನು ಎಸ್‍ಸಿ ಎಸ್‍ಟಿ ಸಮುದಾಯ ಅರ್ಥ ಮಾಡಿಕೊಳ್ಳಬೇಕು. ಮುಸಲ್ಮಾನರ ಮೀಸಲಾತಿ ಕಿತ್ತು ಲಿಂಗಾಯತರಿಗೆ ಮತ್ತು ಒಕ್ಕಲಿಗರಿಗೆ ಹಂಚಿದ್ದು ತಪ್ಪು ನಿರ್ಧಾರ ಒಕ್ಕಲಿಗರೇನೂ ಭಿಕ್ಷುಕರಲ್ಲ ಎಂದು ಕಿಡಿ ಕಾರಿ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ. ಮೇ 13 ರಂದು ಬಿಜೆಪಿ ಶವಯಾತ್ರೆ ನಡೆಯಲಿದೆ ಎಂದು ವ್ಯಂಗ್ಯವಾಡಿದರು.
**********
ಮೀಸಲಾತಿ ಪರಿಷ್ಕರಣೆ ಹೆಸರಿನಲ್ಲಿ ಬಿಜೆಪಿ ಸರ್ಕಾರ ಮಹಾ ವಂಚನೆ ಮಾಡಿದೆ. ಈ ಸಂಬಂಧ ಅದು ಸುಪ್ರೀಂ ಕೋರ್ಟ್‍ನಲ್ಲಿ ಅಫಿಡವಿಟ್ ಸಲ್ಲಿಸಲು ವಿಫಲವಾಗಿದೆ. ಈ ತಪ್ಪು ನಿರ್ಧಾರದಿಂದ 40 ಪಸೆರ್ಂಟ್ ಬಿಜೆಪಿ ಸರ್ಕಾರ 40 ಸ್ಥಾನಗಳಿಗೆ ಕುಸಿಯಲಿದೆ.
- ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ
ಪ್ರಧಾನಿ ಮೋದಿಗೆ 9 ಪ್ರಶ್ನೆಗಳನ್ನು ಕೇಳಿದ ಸುರ್ಜೆವಾಲ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ 9 ಪ್ರಶ್ನೆಗಳನ್ನು ಕೇಳಿದ್ದಾರೆ.
1. ನೀವು ಲಿಂಗಾಯತರು, ಒಕ್ಕಲಿಗರು, ಎಸ್‍ಸಿ ಮತ್ತು ಎಸ್‍ಟಿಗಳ ಮೇಲೆ "ಮೀಸಲಾತಿಯ ವಂಚನೆ ಆಟ ಏಕೆ ಆಡಿದ್ದೀರಿ?
2. ನೀವು ಸುಪ್ರೀಂ ಕೋರ್ಟ್‍ನಲ್ಲಿ ಮೀಸಲಾತಿಯನ್ನು ಏಕೆ ಸಮರ್ಥಿಸಲಿಲ್ಲ ?
3. ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‍ನಲ್ಲಿ ಅಫಿಡವಿಟ್ ಸಲ್ಲಿಸಲು ಬೊಮ್ಮಾಯಿ-ಮೋದಿ ಸರ್ಕಾರ ಏಕೆ ವಿಫಲವಾಯಿತು ?
4. ಮಾರ್ಚ್ 14, 2023 ರಂದು ಸಂಸತ್ತಿನಲ್ಲಿ ಎಸ್‍ಸಿ-ಎಸ್‍ಟಿಗಳಿಗೆ ಹೆಚ್ಚಿದ ಮೀಸಲಾತಿಯನ್ನು ಮೋದಿ ಸರ್ಕಾರ ಏಕೆ ತಿರಸ್ಕರಿಸಿತು ?
5. ಎಸ್‍ಸಿ-ಎಸ್‍ಟಿಗಾಗಿ ಹೆಚ್ಚಿದ ಮೀಸಲಾತಿಯ ಕಾನೂನನ್ನು ಕೇಂದ್ರ ಸರ್ಕಾರವು ಸಂವಿಧಾನದ ಒಂಭತ್ತನೇ ಶೆಡ್ಯೂಲ್‍ನಲ್ಲಿ ಏಕೆ ಹಾಕಲಿಲ್ಲ ?
6. ಎಸ್‍ಸಿ, ಎಸ್‍ಟಿಗಳ ಆಕಾಂಕ್ಷೆಗಳನ್ನು ಪೂರೈಸಲು ನೀವು ಮೀಸಲಾತಿಯ ಶೇ 50 ಸೀಲಿಂಗ್ ಅನ್ನು ಹೆಚ್ಚಿಸಲು ಏಕೆ ನಿರಾಕರಿಸುತ್ತಿದ್ದೀರಿ ?
7. ಧ್ರುವೀಕರಣಕ್ಕಾಗಿ ನೀವು ಏಕೆ ಅನ್ಯಾಯವಾಗಿ ಅಲ್ಪಸಂಖ್ಯಾತರ ಮೀಸಲಾತಿಯನ್ನು ಗುರಿಯಾಗಿಸಿಕೊಂಡಿದ್ದೀರಿ?
8. ಬೊಮ್ಮಾಯಿ ಸರ್ಕಾರವು ಸುಪ್ರೀಂ ಕೋರ್ಟ್‍ನಲ್ಲಿ ಹೇಳಿಕೆ ನೀಡುವ ಮೂಲಕ ಮೀಸಲಾತಿ ಕುರಿತಾದ ತನ್ನದೆ ಆದ ಸರ್ಕಾರಿ ಆದೇಶವನ್ನು ಏಕೆ ತಡೆಹಿಡಿದಿದೆ ?
9. ಎಸ್‍ಸಿ, ಎಸ್‍ಟಿ, ಲಿಂಗಾಯತರು, ಒಕ್ಕಲಿಗರು ಮತ್ತು ಇತರರಿಗೆ ಮೀಸಲಾತಿ ಹೆಸರಿನಲ್ಲಿ ಬಿಜೆಪಿ ಮಾಡಿದ ದ್ರೋಹಕ್ಕಾಗಿ ಪ್ರಧಾನಮಂತ್ರಿಯವರು ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತಾರಾ ?
0 ಕಾಮೆಂಟ್‌ಗಳು