ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ಸಿ.ಅಶೋಕ್

ಜೆಡಿಎಸ್‌ ಮುಖಂಡನ ಮಾನವೀಯತೆ 

ಪಾಂಡವಪುರ: ಅಪಘಾತಕ್ಕೆ ಒಳಗಾಗಿ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಸಿ.ಅಶೋಕ್ ಅವರು ತಮ್ಮ ಸ್ವಂತ ಕಾರಿನಲ್ಲಿ ಕರೆದೊಯ್ದು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.
ತಾಲೂಕಿನ ಕಟ್ಟೇರಿ ಗ್ರಾಮದ ಬಳಿ ಶ್ರೀರಂಗಪಟ್ಟಣ ತಾಲೂಕಿನ ಮಜ್ಜಿಗೆಪುರ ಗ್ರಾಮದ ವ್ಯಕ್ತಿಯೊಬ್ಬರು ಅಪಘಾತಕ್ಕೆ ಒಳಗಾಗಿದ್ದಾಗ ಅದೇ ಮಾರ್ಗವಾಗಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಜಿಪಂಮಾಜಿ ಸದಸ್ಯ, ಶಾಸಕ ಸಿ.ಎಸ್.ಪುಟ್ಟರಾಜು ಅವರ ಅಣ್ಣನ ಮಗ ಸಿ.ಅಶೋಕ್ ಅವರು ಚುನಾವಣಾ ಪ್ರಚಾರ ರದ್ದುಗೊಳಿಸಿ ತಮ್ಮ ಕಾರಿನಲ್ಲಿಯೇ  ಮೈಸೂರಿನಕೆ.ಆರ್‌.ಆಸ್ಪತ್ರೆಗೆ ಕಳುಹಿಸಿ ಕೊಟ್ಟರು. ಅಲ್ಲದೇ ಕೂಡಲೇ ಆಸ್ಪತ್ರೆಯ ವೈದ್ಯರೊಂದಿಗೆ ದೂರವಾಣಿ ಕರೆ ಮೂಲಕ ಚರ್ಚಿಸಿ ಸಕಾಲಕ್ಕೆ ಚಿಕಿತ್ಸೆಯನ್ನು ಕೊಡಿಸುವಲ್ಲಿಯೂ ನೆರವಾಗಿದ್ದಾರೆ. ಸಮಯ ಪ್ರಜ್ಞೆ ಮೆರೆದು ಆಸ್ಪತ್ರೆಗೆ ಕಳುಹಿಸಿದ ಹಿನ್ನೆಲೆಯಲ್ಲಿ ಅಪಘಾತಕ್ಕೆ ಒಳಗಾಗಿದ್ದ ವ್ಯಕ್ತಿ ಪ್ರಾಣಾಪಾಯದಿಂದ  ಪಾರಾಗಿದ್ದಾನೆ‌. ಸಿ.ಅಶೋಕ್ ಅವರ ಮಾನವೀಯತೆಗೆ ಸಾರ್ವಜನಿಕರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿ.ಅಶೋಕ್ ಅವರು ಹಿಂದೆಯೂ ಸಹ ತಾಲೂಕಿನ ಕಣಿವೆಕೊಪ್ಪಲು ಗೇಟ್ ಬಳಿ ಅಪಘಾತಕ್ಕೆ ಒಳಗಾಗಿದ್ದ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿಯೇ ಕರೆತಂದು ಚಿಕಿತ್ಸೆ ಕೊಡಿಸಿ ಜೀವ ರಕ್ಷಣೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು