ಪಾಂಡವಪುರ ಪಟ್ಟಣದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷ ಹಾಗೂ ಮನ್‍ಮುಲ್ ಮಾಜಿ ಉಪಾಧ್ಯಕ್ಷ, ಕಾಂಗ್ರೆಸ್ ಮುಖಂಡ ಗೌಡಗೆರೆ ಜಿ.ಇ.ರವಿಕುಮಾರ್ ಮತ್ತು ಬೆಂಬಲಿಗರು ಶಾಸಕ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಪಾಂಡವಪುರ: ಪಾಂಡವಪುರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಹಾಗೂ ಮನ್‍ಮುಲ್ ಮಾಜಿ ಉಪಾಧ್ಯಕ್ಷ, ಕಾಂಗ್ರೆಸ್ ಮುಖಂಡ ಗೌಡಗೆರೆ ಜಿ.ಇ. ರವಿಕುಮಾರ್ ಮತ್ತು ಬೆಂಬಲಿಗರು ಶಾಸಕ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲಿ ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕ ಸಿ.ಎಸ್.ಪುಟ್ಟರಾಜು ಅವರ ಪಟ್ಟಣದ ನಿವಾಸದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಗೌಡಗೆರೆ ರವಿ ಮತ್ತು ವಿವಿಧ ಗ್ರಾಮಗಳ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಸೇರ್ಪಡೆಗೊಂಡರು.
ಈ ವೇಳೆ ಸಿ.ಎಸ್.ಪುಟ್ಟರಾಜು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮನ್‍ಮುಲ್ ಮಾಜಿ ಉಪಾಧ್ಯಕ್ಷರಾದ ಜಿ.ಇ.ರವಿಕುಮಾರ್ ಅವರು ತಮ್ಮ ತಂದೆ ಕಾಲದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ನಮ್ಮ ಜೆಡಿಎಸ್ ಪಕ್ಷಕ್ಕೆ ಬಂದಿರುವುದು ಪಕ್ಷಕ್ಕೆ ಶಕ್ತಿ ಬಂದಂತಾಗಿದೆ. ಇವರೊಂದಿಗೆ ಬೆಳ್ಳಾಳೆ, ನರಹಳ್ಳಿ, ಹಳೇÀಬೀಡು, ಹೊಸಕೋಟೆ, ಚಿಕ್ಕಾಡೆ ಸೇರಿದಂತೆ ಹಲವಾರು ಗ್ರಾವiಗಳ ಮುಖಂಡರು ಪಕ್ಷ ಸೇರ್ಪಡೆಗೊಂಡಿದ್ದಾರೆ. ಈ ಬಾರಿ ನಾನು ಗೆಲ್ಲುವ ವಿಶ್ವಾಸವಿದೆ. ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ದಿ ಕೆಲಸಗಳೇ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಮಂಡ್ಯದಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಬಂಡಾಯದ ಭೀತಿ ಇಲ್ಲ. ಕೆ.ಆರ್.ಪೇಟೆ ಹಾಗೂ ಮಂಡ್ಯದಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಪುಟ್ಟರಾಜು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಮ್ಮ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಏಳು ಅಭ್ಯರ್ಥಿಗಳೊಂದಿಗೂ ಇಂದು ಬೆಳಗ್ಗೆ ಬಿಡದಿಯಲ್ಲಿ ಸಭೆ ನಡೆಸಿ ಯಾವ ರೀತಿ ಚುನಾವಣೆ ಎದುರಿಸಬೇಕೆಂಬುದರ ಬಗ್ಗೆ ಚರ್ಚಿಸಿದ್ದಾರೆ. ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡರು ಜಿಲ್ಲೆಯಲ್ಲಿ ಮೇ.5 ಮತ್ತು 6ರಂದು ಪ್ರವಾಸ ನಡೆಸಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.
ಸಂದರ್ಭದಲ್ಲಿ ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ವೈರಮುಡಿಗೌಡ, ಹೊಸಕೋಟೆ ಪುಟ್ಟಣ್ಣ, ದೇಶವಳ್ಳಿ ಪ್ರಭಾಕರ್, ಭಾಸ್ಕರ್, ಚಿಕ್ಕಾಡೆ ಗಿರೀಶ್ ಸೇರಿದಂತೆ ಹಲವಾರು ಹಾಜರಿದ್ದರು.
0 ಕಾಮೆಂಟ್‌ಗಳು