3 ರಂದು ದರ್ಶನ್ ಪರ ಡಿ.ಕೆ.ಶಿವಕುಮಾರ್ ಪ್ರಚಾರ

ಪಾಂಡವಪುರ : ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್-ರೈತಸಂಘ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇ,3 ರಂದು ಪಾಂಡವಪುರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಡಾ.ಎಚ್.ಎನ್.ರವೀಂದ್ರ ಹೇಳಿದರು.
ಪಟ್ಟಣದ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮೇ.3 ರಂದು ಹೆಲಿಕಾಪ್ಟರ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಿ.ಎಸ್.ಛತ್ರ ಅಥವಾ ತೂಬಿನ ಕೆರೆ ಹೆಲಿಪ್ಯಾಡ್‍ಗೆ ಆಗಮಿಸಲಿದ್ದು, ಹೆಲಿಪ್ಯಾಡ್‍ನಿಂದ ಡಿಕೆಶಿ ಅವರನ್ನು ಬೈಕ್ ರ್ಯಾಲಿ ಮೂಲಕ ಪಾಂಡವಪುರಕ್ಕೆ ಕರೆತರಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ(ಕಿಟಿ), ತಾಲೂಕು ರೈತಸಂಘದ ಅಧ್ಯಕ್ಷ ಪಿ.ನಾಗರಾಜು, ಮುಖಂಡರಾದ ಕಣಿವೆ ರಾಮು, ಅಂತನಹಳ್ಳಿ ಬಸವರಾಜು, ಚಂದ್ರಶೇಖರ್, ದರ್ಶನ್, ವಿಜಯೇಂದ್ರ, ಗೋಪಾಲ್, ಶಿವರಾಮ್ ಇದ್ದರು.
 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು