ಖಾಸಗಿ ಬಸ್ ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ : 10 ಜನರ ಸಾವು

ಮೈಸೂರು : ಮೈಸೂರು-ಟಿ.ನರಸೀಪುರ ರಾಷ್ಟ್ರೀಯ ಹೆದ್ದಾರಿ ಕುರುಬೂರು ಗ್ರಾಮದ ಬಳಿ ಇನೋವಾ ಕಾರು ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಹತ್ತು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 
ಕಾರಿನಲ್ಲಿದ್ದ ಬಳ್ಳಾರಿ ಮೂಲದ ಪ್ರವಾಸಿಗರು ಮಹದೇಶ್ವರ ಬೆಟ್ಟಕ್ಕೆ ಹೋಗಿ ಬರುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ರಸ್ತೆಯ ಪಕ್ಕದಲ್ಲಿ ಜಂಗಲ್ ಕಟಿಂಗ್ ಮಾಡದೇ ಇದ್ದ ಕಾರಣ ಎದುರು ಬರುವ ವಾಹನಗಳು ಕಾಣಿಸದೆ ಇಂತಹ ಭೀಕರ ಅಪಘಾತ ಸಂಭವಿಸಿದೆ ಎನ್ನಲಾ ಗಿದೆ.
ಅಪಘಾತಕ್ಕೆ ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಕಾರಣವಾಗಿದ್ದು. ಅಪಘಾತದಲ್ಲಿ ಮಡಿದವರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ ನೀಡಬೇಕೆಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು  ಶಾಂತಕುಮಾರ ಒತ್ತಾಯಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು