ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ತಮ್ಮ ಸ್ವ ಗ್ರಾಮ ಚಿನಕುರಳಿ ಗ್ರಾಮದ ಮತಗಟ್ಟೆಯಲ್ಲಿ ಪತ್ನಿ ಜಿಪಂ ಮಾಜಿ ಸದಸ್ಯೆ ನಾಗಮ್ಮ ಅವರೊಂದಿಗೆ ಮತ ಚಲಾಯಿಸಿದರು.
ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗಮನಾರ್ಹ ಸಂಖ್ಯೆಯಲ್ಲಿ ಗೆಲುವು ಸಾಧಿಸುತ್ತಾರೆ. ಮಂಡ್ಯ ಜಿಲ್ಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಪ್ರಚಾರಕ್ಕೆ ಯಶಸ್ಸು ಸಿಗುತ್ತಿದ್ದು. ಜಿಲ್ಲೆಯ ಏಳು ಸ್ಥಾನಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
0 ಕಾಮೆಂಟ್‌ಗಳು