ಪಾಂಡವಪುರ : ಮಡಿವಾಳರ ಸಂಘದ ಅಧ್ಯಕ್ಷ ರವಿಕುಮಾರ್ ಜೆಡಿಎಸ್ ಸೇರ್ಪಡೆ

ಪಾಂಡವಪುರ: ತಾಲೂಕು ಮಡಿವಾಳರ ಸಂಘದ ಅಧ್ಯಕ್ಷ ಬಿ.ರವಿಕುಮಾರ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.
ಪಟ್ಟಣದ ಶಾಸಕರ ನಿವಾಸದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಅವರ ಪುತ್ರ ಸಿ.ಪಿ.ಶಿವರಾಜು ಸಮ್ಮುಖದಲ್ಲಿ ಪಕ್ಷದ ಟವಲ್ ಹಾಕಿಸಿಕೊಳ್ಳುವ ಮೂಲಕ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು.
ಬಳಿಕ ಮಾತನಾಡಿದ ಬಿ.ರವಿಕುಮಾರ್, ಶಾಸಕ ಸಿ.ಎಸ್.ಪುಟ್ಟರಾಜು ಅವರ ಅಭಿವೃದ್ದಿ ಕಾರ್ಯ, ಜನಪರ ಆಡಳಿತವನ್ನು ಮೆಚ್ಚಿ ನಾನು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಸಮುದಾಯದ ಮುಖಂಡರೊಂದಿಗೆ ಜೆಡಿಎಸ್ ಅಭ್ಯರ್ಥಿ ಶಾಸಕ ಸಿ.ಎಸ್.ಪುಟ್ಟರಾಜು ಪರವಾಗಿ ಅವರ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದರು.
ಮುಸ್ಲಿಂ ಯುವಕರು ಜೆಡಿಎಸ್ ಸೇರ್ಪಡೆ: ಪಟ್ಟಣದ ಬಸವನಗುಡಿ ಬೀದಿಯ ಹಲವಾರು ಮುಸ್ಲಿಂ ಯುವಕರು ರೈತಸಂಘ ತೊರೆದು ಸಿ.ಪಿ.ಶಿವರಾಜು ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.
ಸಂದರ್ಭದಲ್ಲಿ ಪುರಸಭೆ ಸದಸ್ಯ ಬಿ.ವೈ.ಬಾಬು, ಮುಖಂಡ ಎಸ್.ಎನ್.ನಾರಾಯಣಗೌಡ, ಬಿ.ಎನ್.ನಟರಾಜು, ಬಸವರಾಜು ಸೇರಿದಂತೆ ಹಲವರು ಹಾಜರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು