ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೈದ್ಯ ನೇಣು ಬಿಗಿದು ಆತ್ಮಹತ್ಯೆ

ಮಂಡ್ಯ : ತಾನು ಅತಿಯಾಗಿ ಪ್ರೀತಿಸುತ್ತಿದ್ದ ಸಹೋದರಿಯ ಸಾವಿನಿಂದ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವೈದ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ನಡೆದಿದೆ.

ಡಾ.ವೇಣು ಗೋಪಾಲ್(57) ಆತ್ಮಹತ್ಯೆ ಮಾಡಿಕೊಂಡ ಖ್ಯಾತ ವೈದ್ಯರು. ಇವರು ಮಂಡ್ಯ ಸಮೀಪದ ಸಾಂಜೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಗುರುವಾರ ರಾತ್ರಿ ಕುದುರಗುಂಡಿ ಗ್ರಾಮದ ಕೆರೆಯ ಬಳಿ ಡಾ.ವೇಣುಗೋಪಾಲ್‌ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು