ಕಾಂಗ್ರೆಸ್ ಮುಖಂಡ ಮೈಸೂರು ಬಸವಣ್ಣಗೆ ಮೂಡ ಅಧ್ಯಕ್ಷ‌ ಸ್ಥಾನ ಕೊಡಲು ಸಿಎಂಗೆ ಮನವಿ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ, ಕೆ.ಆರ್. ಕ್ಷೇತ್ರದ ಕಾಂಗ್ರೆಸ್ ಮುಖಂಡ‌ ಮೈಸೂರು ಬಸವಣ್ಣ ಅವರಿಗೆ ಮೂಡ ಅಧ್ಯಕ್ಷ ಸ್ಥಾನ ನೀಡುವಂತೆ‌ ಬಸವಣ್ಣ ಅವರ ಅಭಿಮಾನಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಸವಣ್ಣ ಅವರು ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಗೆಲುವಿಗೆ ಹಗಲಿರುಳು ಶ್ರಮಿಸಿ ವ್ಯಾಪಕ ಪ್ರಚಾರ ನಡೆಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷ ಸಂಘಟನೆಯಲ್ಲಿ ‌ತೊಡಗಿಸಿಕೊಂಡಿದ್ದಾರೆ.ಅವರ‌ ಸೇವೆಯನ್ನು ಪರಿಗಣಿಸಿ ಮೂಡ ಅಧ್ಯಕ್ಷ ಸ್ಥಾನ ನೀಡುವಂತೆ ಅಭಿಮಾನಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು