ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾಗಿ ರಫತ್ ಖಾನ್ ನೇಮಕ

ಮೈಸೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್
ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಗೆ ಮೈಸೂರು ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ರಫತ್ ಖಾನ್  ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ರಫತ್‌ಖಾನ್‌ ಕ್ರಿಯಾಶೀಲ ನಾಯಕರಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಎಸ್‌ಡಿಪಿಐ ಪಕ್ಷವನ್ನು ಅತ್ಯುತ್ತಮವಾಗಿ ಸಂಘಟನೆ ಮಾಡಿದ್ದಾರೆ. ಅವರ ಬದ್ಧತೆ, ಪ್ರಾಮಾಣಿಕತೆ ಮತ್ತು ಕ್ರಿಯಾಶೀಲತೆ ಗಮನಿಸಿ ರಾಜ್ಯ ಸಮಿತಿಗೆ ಆಯ್ಕೆ ಮಾಡಲಾಗಿದೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್‌ಮಜೀದ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.