ಮಲೆ ಮಹದೇಶ್ವರ ಬೆಟ್ಟ ಪ್ಲಾಸ್ಟಿಕ್ ಮುಕ್ತ ಮಾಡಲು ಅಧಿಕಾರಿಗಳ ಪರಿಶೀಲನೆ


ವರದಿ-ಹನೂರು ವಿಜಯಕುಮಾರ್‌

ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಾದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿ ಮಾಡಲು ಚಾಮರಾಜನಗರ ಜಿಲ್ಲಾಧಿಕಾರಿಗಳು ಆದೇಶ ನೀಡಿದ ಹಿನ್ನೆಲೆ ಅಧಿಕಾರಿಗಳು ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಲು ಪರಿಶೀಲನೆ ನಡೆಸಿದರು.

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪ್ರಾಧಿಕಾರದ ಉಪಾಧ್ಯಕ್ಷರು ರವರು ಮತ್ತು ಜಿಲ್ಲಾಧಿಕಾರಿಗಳು, ಚಾಮರಾಜನಗರ ರವರು ಮಹದೇಶ್ವರ ಬೆಟ್ಟದಲ್ಲಿ ನಡೆಸಿದ ಸಭೆಯಲ್ಲಿ ಮಾದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಬಗ್ಗೆ ಚರ್ಚಿಸಿ ಒಂದು ಸಮಿತಿಯನ್ನು ರಚಿಸಲು ತೀರ್ಮಾನ ಕೈಗೊಂಡ ಕಾರಣ ಡಿಎಫ್ ಡಾ. ಸಂತೋಷ್ ಕುಮಾರ್  ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ರವರು ಮಾದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯನ್ನಾಗಿ ಮಾಡಲು ಮೊದಲ ಹಂತವಾಗಿ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾಧಿಗಳಲ್ಲಿ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ತಪಾಸಣೆ ಮಾಡಲು ಚೆಕ್ ಪೋಸ್ಟ್ ನಿರ್ಮಾಣಕ್ಕಾಗಿ ತಾಳಬೆಟ್ಟದ ಹಾಗೂ ವಡಕೆಹಳ್ಳ ಸಮೀಪದಲ್ಲಿ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು