ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ : ಖಾದಿ ಬೋರ್ಡ್ ಮಾಜಿ ನಿರ್ದೇಶಕ ನರಸಿಂಹಮೂರ್ತಿ

ಮೈಸೂರು : ಭಾರತದ ಹೆಮ್ಮೆಯ ಪುತ್ರ, ನಮ್ಮ ರಾಷ್ಟ್ರ ಕಂಡ ಶ್ರೇಷ್ಠ ನಾಯಕರಾದ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರದಾರೆಗಳು ಇಂದಿಗೂ ಪ್ರಸ್ತುತ ಎಂದು ಕಾಂಗ್ರೆಸ್ ಮುಖಂಡ, ಖಾದಿ ಬೋರ್ಡ್ ಮಾಜಿ ನಿರ್ದೇಶಕ ನರಸಿಂಹಮೂರ್ತಿ ಹೇಳಿದರು.
ಅಂಬೇಡ್ಕರ್ ಜಯಂತಿ ಪ್ರಯುಕ್ತ ನಗರದ ಕೆಸರೆ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಪ್ರತಿಮೆ ಎದುರು
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಸಾಮಾಜಿಕವಾಗಿ ಸಾಕಷ್ಟು ಸಂಚಲನ ಮೂಡಿಸಿದ್ದಾರೆ. ಅವರ ತತ್ವ ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುವಂತಿದೆ. ಅಲ್ಲದೆ, ಪ್ರತಿಯೊಬ್ಬ ಭಾರತೀಯರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್.
೧೮೯೧ರ ಏಪ್ರಿಲ್ ೧೪ರಂದು ಮಧ್ಯಪ್ರದೇಶದ ಮಾಹೋ ಎಂಬಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನಿಸಿದ್ದರು. ಬಾಲ್ಯದಲ್ಲಿ ಸಾಕಷ್ಟು ಕಷ್ಟಗಳನ್ನು ಕಂಡಿದ್ದ ಅಂಬೇಡ್ಕರ್ ಅವರು ತಮ್ಮ ಛಲ ಸಾಧನೆಯ ಮೂಲಕ ಭವ್ಯ ಭಾರತದ ಕನಸು ಕಾಣುತ್ತಾ ಬೆಳೆದು ನಮ್ಮ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ರೂಪುಗೊಂಡರು.
ಡಾ. ಅಂಬೇಡ್ಕರ್ ಅವರ ಬೋಧನೆಗಳು, ಆದರ್ಶಗಳು ಸದಾ ನಮ್ಮ ಬದುಕಿಗೆ ದಾರಿ ತೋರಲಿ. ಬಾಬಾ ಸಾಹೇಬರ ಆಶಯದಂತೆ ಬದುಕೋಣ. 
ಅವರು ಪ್ರತಿಪಾದಿಸಿದ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂಬ ಭರವಸೆಯನ್ನು ನಾವು ನೀಡೋಣ. ನಮಗೆ ಸಮಾನತೆಯ ಹಾದಿಯನ್ನು ತೋರಿಸಿದ ಮತ್ತು ಸಹೋದರತ್ವದ ಗುರಿಯತ್ತ ನಮ್ಮನ್ನು ಮುನ್ನಡೆಸಿದ ಮಹಾನ್ ಶಕ್ತಿಯನ್ನು ನಾವು ಸ್ಮರಿಸೋಣ. 
ಅವರ ವಿಚಾರಗಳು ಸದಾ ಕಾಲ ನಮಗೆಲ್ಲರಿಗೂ ಸ್ಫೂರ್ತಿಯಾಗಲಿ, 
ಭಾರತಕ್ಕೆ ಸಂವಿಧಾನ ನೀಡಲು ಶ್ರಮಿಸಿದ ಮತ್ತು ನಮಗೆ ದಾರಿ ದೀಪವಾದ ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ. ಸರ್ವರಿಗೂ ಅಂಬೇಡ್ಕರ್ ಜಯಂತಿಯ ಶುಭಾಶಯಗಳು ಎಂದರು.
ಈ ಸಂದರ್ಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರದೀಪ್ ಚಂದ್ರ ಸೇರಿದಂತೆ ಇನ್ನಿತರ ಗಣ್ಯರು ಇದ್ದರು.

ಅಂಬೇಡ್ಕರ್ ಆದರ್ಶಗಳು ನಮಗೆ ದಾರಿದೀಪ
ಭಾರತದಲ್ಲಿ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದ್ದ ಕಾಲಘಟ್ಟದಲ್ಲಿ ಸಾಕಷ್ಟು ನೋವು ಅವಮಾನಗಳನ್ನು ಎದುರಿಸಿ ಜಾತಿ ವ್ಯವಸ್ಥೆಯ ಭೂತವನ್ನು ಬಡಿದೋಡಿಸಿ, ಸಮಾಜಕ್ಕೆ ಅಂಟಿದ ಮೇಲು-ಕೀಳಿನ ತಾರತಮ್ಯವನ್ನು ಶಿಕ್ಷಣದಿಂದ ಹೋಗಲಾಡಿಸಿದ ಧೀಮಂತ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್ ಆಗಿದ್ದಾರೆ. ಅವರು ದೇಶಕ್ಕೆ ನೀಡಿದ ಕೊಡುಗೆಗಳು ಅಗಾಧವಾದದ್ದು. ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಿರುವ ಮಹಾನಾಯಕರ ಆದರ್ಶಗಳು ನಮಗೆ ದಾರಿ ದೀಪ.
ನರಸಿಂಹಮೂರ್ತಿ, ಕಾಂಗ್ರೆಸ್ ಮುಖಂಡರು 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು