ಶಾಸಕ ಎಚ್.ಡಿ.ರೇವಣ್ಣ ನಾಲ್ಕು ದಿನಗಳ ಕಾಲ ಎಸ್ಐಟಿ ವಶಕ್ಕೆ

ಬೆಂಗಳೂರು : ಕೆ.ಆರ್.ನಗರದಲ್ಲಿ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್ಡಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ನಿನ್ನೆ ರೇವಣ್ಣ ಅವರನ್ನು ಬಂಧಿಸಿದ್ದ ಎಸ್ಐಟಿ ಅಧಿಕಾರಿಗಳು ಇಂದು ಸಂಜೆ ವೇಳೆಗೆ ಕೋರಮಂಗಲದಲ್ಲಿರುವ 17 ನೇ ಎಸಿಎಂಎಂ ನ್ಯಾಯಾಧೀಶ ರವೀಂದ್ರಕುಮಾರ್ ಬಿ ಕಟ್ಟಿಮನಿಯವರು ಮುಂದೆ ಹಾಜರಿಪಡಿಸಿದ್ದರು‌.
ಪ್ರಕರಣದ ತನಿಖೆ ನಡೆಸಲು ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಮನವಿ ಮಾಡಿದರು‌. ಅದರೆ ವಾದ ಪ್ರತಿ ವಾದ ಆಲಿಸಿದ ನ್ಯಾಯಾಲಯ ಹೆಚ್ಚಿನ ವಿಚಾರಣೆಗೆ ರೇವಣ್ಣ ಅವರನ್ನು ಮೇ 8 ರವರೆಗೆ ಎಸ್ಐಟಿ ವಶಕ್ಕೆ ನೀಡಿ ಆದೇಶಿದ್ದಾರೆ
.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು