ಪೆಟ್ರೋಲ್, ಡಿಸೇಲ್ ಬೆಲೆ ಇಳಿಸದಿದ್ದರೆ ಉಗ್ರ ಹೋರಾಟ : ಸರ್ಕಾರಕ್ಕೆ ಬಿಜೆಪಿ ಮುಖಂಡ ಜಯಪ್ರಕಾಶ್ (ಜೆಪಿ) ಎಚ್ಚರಿಕೆ
ಜೂನ್ 20, 2024
ಮೈಸೂರು : ಬಿಟ್ಟಿ ಭಾಗ್ಯಗಳಿಗೆ ಹಣ ಹೊಂದಿಸಲು ಸರ್ಕಾರ ಇಂದನ ಬೆಲೆ ಏರಿಕೆ ಮಾಡಿದ್ದು, ಕೂಡಲೇ ಇಂದನ ಬೆಲೆಯನ್ನು ಇಳಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಮುಖಂಡ, ಕಾವೇರಿ ಹೋರಾಟಗಾರ ಜಯಪ್ರಕಾಶ್ (ಜೆಪಿ) ಒತ್ತಾಯಿಸಿದರು. ನಗರದ ಗಾಂಧಿವೃತ್ತದಲ್ಲಿ ಗುರುವಾರ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲಾ ಒಂದು ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರ ಜತೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಿ ಅದನ್ನು ಅಭಿವೃದ್ಧಿಗೆ ಬಳಸುತ್ತೇವೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸುವ ಮುಂದಾಲೋಚನೆ ಇಲ್ಲದೆ ಬೆಲೆ ಏರಿಕೆ ಮಾಡಿದ್ದು ಸರಿ ಇಲ್ಲ. ನೀವು ಜನರಿಗೆ ಸುಳ್ಳು ಆಶ್ವಾಸನೆ ನೀಡಿ ಅಡ್ಡದಾರಿಯಿಂದ ಅಧಿಕಾರಕ್ಕೆ ಬಂದಿದ್ದೀರಿ. ಯಾವುದೇ ಶಾಸಕರಿಗೆ ಅನುದಾನ ನೀಡದ ಕಾರಣ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಬೆಲೆ ಏರಿಕೆ ಮಾಡಿದ್ದು ಸರಿಯಲ್ಲ. ಈಗಾಗಲೇ ಮೂರು ಬಾರಿ ಮದ್ಯದ ಬೆಲೆಯನ್ನು ಏರಿಸಿದ್ದೀರಿ, ಕೂಡಲೇ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು ಇಳಿಸಬೇಕು ಎಂದು ಜಯಪ್ರಕಾಶ್ ಆಗ್ರಹಿಸಿದರು. ಈ ವೇಳೆ ಬಿಜೆಪಿಯ ನೂರಾರು ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
0 ಕಾಮೆಂಟ್‌ಗಳು