ರಾಕೇಶ್ ಸಿದ್ದರಾಮಯ್ಯ ಹುಟ್ಟುಹಬ್ಬದ ಪ್ರಯುಕ್ತ ಶ್ರೀನಿವಾಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಜುಲೈ 13, 2024
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ೪೭ನೇ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಮುಖಂಡ ಗಂಧನಹಳ್ಳಿ ವೆಂಕಟೇಶ್ ನೇತೃತ್ವದಲ್ಲಿ ನಗರದ ಶ್ರೀನಿವಾಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ಪೌರಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ನಗರದ ಟೌನ್‌ಹಾಲ್ ಆವರಣದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೂರಾರು ಪೌರಕಾರ್ಮಿಕರು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರಾಕೇಶ್ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗಂಧನಹಳ್ಳಿ ವೆಂಕಟೇಶ್ ಮಾತನಾಡಿ, ನಾವೆಲ್ಲರೂ ರಾಕೇಶ್ ಸಿದ್ದರಾಮಯ್ಯ ಅವರ ನೆರಳಿನಲ್ಲಿ ಬೆಳೆದವರು. ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಕಾಯಕಯೋಗಿಗಳಾದ ಮೈಸೂರು ಮಹಾನಗರ ಪಾಲಿಕೆಯ ಪೌರಕಾರ್ಮಿರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಸುವುದು ಮತ್ತು ಮೈಸೂರು ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪಾಲಿಕೆಗೆ ೧೦ ಸಾವಿರ ಬಟ್ಟೆ ಬ್ಯಾಗುಗಳನ್ನು ವಿತರಣೆ ಮಾಡುತ್ತಿದ್ದೇವೆ. ಈ ಮೂಲಕ ರಾಕೇಶ್ ಅವರ ನೆನಪು ಸದಾಕಾಲ ನಮ್ಮೆಲ್ಲರ ಮನಸ್ಸಿನಲ್ಲಿ ಹಸಿರಾಗಿ, ಶಾಶ್ವತವಾಗಿ ಇರುವಂತೆ ನಿರಂತರವಾಗಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ ಎಂದರು. ಕಾಂಗ್ರೆಸ್ ಮುಖಂಡ ಬೀರಿಹುಂಡಿ ಬಸವಣ್ಣ ಮಾತನಾಡಿ, ರಾಕೇಶ್ ಸಿದ್ದರಾಮಯ್ಯ ಒಬ್ಬ ಸಂಘಟನಾ ಚತುರರು, ರಾಜ್ಯದಲ್ಲಿ ಉತ್ತಮ ನಾಯಕನಾಗಿ ಬೆಳೆಯುವ ಅವಕಾಶವಿತ್ತು. ಆದರೇ, ದುರ್ದೈವ ಅವರು ೮ ವರ್ಷದ ಹಿಂದೆ ಅಕಾಲಿಕ ಮರಣಕ್ಕೆ ತುತ್ತಾದುದ್ದು, ನಮ್ಮೆಲ್ಲರಿಗೂ ನೋವು ತಂದಿದೆ. ಅವರ ಹೆಸರನ್ನು ಚಿತಸ್ತಾಯಿಯಾಗಿ ಉಳಿಸಲು ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಮುಖಂಡರು ಕೇಕ್ ಕತ್ತರಿಸಿ ಪೌರಕಾರ್ಮಿಕರಿಗೆ ಹಂಚಿದರು. ಬಳಿಕ ಉಚಿತ ಆರೋಗ್ಯ ತಪಾಸಣೆ ಸಂಜೆ ನಾಲ್ಕು ಗಂಟೆವರೆಗೂ ನಡೆಯಿತು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ಸುಬ್ರಹ್ಮಣ್ಯ, ನಜರ್‌ಬಾದ್ ನಟರಾಜ್, ದಕ್ಷಿಣಾಮೂರ್ತಿ, ಆರೀಫ್ ಪಾಷ, ಹರೀಶ್, ಪ್ರಭು, ಪೈ.ಬಿರೇಶ್, ಪೌರಕಾರ್ಮಿಕರ ಸಂಘದ ಮುಖಂಡರಾದ ಮಾರಾ, ಸುರೇಶ್ ಮುಂತಾದವರು ಇದ್ದರು.
0 ಕಾಮೆಂಟ್‌ಗಳು