ಡಿಸೆಂಬರ್ 23 ರಂದು ಮೈಸೂರಿನಲ್ಲಿ ವಿಶ್ವ ರೈತ ದಿನಾಚರಣೆ : ರೈತರ ಬೃಹತ್ ಮೆರವಣಿಗೆ, ಹಿರಿಯ ರೈತ ಹೋರಾಟಗಾರರಿಗೆ ಸನ್ಮಾನ


 ಮೈಸೂರು : ಡಿಸೆಂಬರ್ 23 ರಂದು ಮೈಸೂರಿನಲ್ಲಿ ವಿಶ್ವ ರೈತ ದಿನಾಚರಣೆ ಆಚರಿಸಲಾಗುವುದು ಎಂದು          ಕರ್ನಾಟಕ ರಾಜ್ಯ ರೈತಸಂಘಗಳ ಮಹಾ ಒಕ್ಕೂಟದ ವರಿಷ್ಠ ನಾಯಕ ಇಂಗಲಗುಪ್ಪೆ ಕೃಷ್ಣೇಗೌಡ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತಸಂಘಗಳ ಮಹಾ ಒಕ್ಕೂಟ ಆಶ್ರಯದಲ್ಲಿ ಹಾಗೂ ಕರ್ನಾಟಕ ರಾಜ್ಯ ರೈತಸಂಘ (ರೈತಬಣ)ದ ನೇತೃತ್ವದಲ್ಲಿ ಡಿ.23 ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ನಗರದ ಪುರಭವನದ ಆವರಣದಲ್ಲಿ ‘ವಿಶ್ವ ರೈತ ದಿನಾಚರಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ರೈತರು ಭಾಗವಹಿಸಲಿದ್ದಾರೆ.

ಈ ಸಂಬಂಧ ಅಂದು ಬೆಳಗ್ಗೆ ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಪುರಭನದ ತನಕ ಸಾಂಸ್ಕøತಿಕ ಕಲಾತಂಡಗಳ ಬೃಹತ್ ಮೆರವಣಿಗೆ ಇರುತ್ತದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದು, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು, ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು, ಧಾರಾವಾಡದ ಶ್ರೀ ರೇವಣ್ಣ ಸಿದ್ದೇಶ್ವರ ಮಹಾಮಠದ ಶ್ರೀ ಡಾ.ಬಸವರಾಜ ದೇವರು ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು.

ಅಲ್ಲದೇ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಸದಸ್ಯರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಘನ ಉಪಸ್ಥಿತಿ ಇರುತ್ತದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ರೈತಸಂಘ (ರೈತಬಣ)ದ ಅಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೇಗೌಡ ಅವರು ವಹಿಸುವರು. ಕರ್ನಾಟಕ ರಾಜ್ಯ ರೈತಸಂಘಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ಬೀರಪ್ಪ ದೇಶನೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. 

ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯ ಸ್ವಾಮಿ, ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆ.ಹರೀಶ್ ಗೌಡ, ಡಾ.ರಂಗನಾಥ್, ಹೆಚ್.ಸಿ.ಬಾಲಕೃಷ್ಣ, ದರ್ಶನ್ ದ್ರುವನಾರಾಯಣ, ಕದಲೂರು ಉದಯ್, ಕೊತ್ತನೂರು ಮಂಜುನಾಥ್, ಎಂಎಲ್‍ಸಿ ಕೆ.ವಿವೇಕಾನಂದ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ಹೆಚ್.ಪಿ.ಮಂಜುನಾಥ್, ಸಾರಾ ಮಹೇಶ್, ಕೆ.ಸಿ.ನಾರಾಯಣಗೌಡ, ಮಾಜಿ ಮೇಯರ್ ಸಂದೇಶ್ ಸ್ವಾಮಿ ಮತ್ತು ಸಮಾಜ ಸೇವಕರಾದ ಬಿ.ರೇವಣ್ಣ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಮೈಸೂರು ಜಿಲ್ಲಾಧಿಕಾರಿಗಳಾದ ಮಾನ್ಯ ಲಕ್ಷ್ಮೀಕಾಂತ ರೆಡ್ಡಿ, ದಕ್ಷಿಣ ವಲಯ ಐಜಿಪಿ ಮಾನ್ಯ ಡಾ.ಬೋರಲಿಂಗಯ್ಯ, ಪೊಲೀಸ್ ಕಮೀಷನರ್ ಮಾನ್ಯ ಸೀಮಾ ಲಾಟ್ಕರ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಹಿರಿಯ ರೈತ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಮತ್ತು ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು.

ಈ ಕಾರ್ಯಕ್ರಮಕ್ಕೆ ಮೈಸೂರು ಮಂಡ್ಯ ಚಾಮರಾಜನಗರ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು