ಮಾಧ್ಯಮದವರೊಂದಿಗೆ ಅವರು ಮಾತನಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾವಿರಾಗು ರೈತರ ಜತೆಗೂಡಿ ಡಿ.9 ರಿಂದ ಅನಿರ್ಧಿಷ್ಟಾವಧಿ ಕಾಲ ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೇ, ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಜತೆಗೆ ಅದಿವೇಶನದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದಾಗಿಯೂ ಭರವಸೆ ನೀಡಿರುವ ಹಿನ್ನಲೆಯಲ್ಲಿ ಮಹಾ ಒಕ್ಕೂಟದ ಮುಖಂಡರ ಜತೆ ಚರ್ಚೆ ನಡೆಸಿ ಮುತ್ತಿಗೆ ಕಾರ್ಯಕ್ರಮ ಹಿಂಪಡೆದು ಅಧಿವೇಶನ ಸುಗಮವಾಗಿ ನಡೆಯಲು ಸಹಕಾರ ನೀಡುವುದಾಗಿ ಇಂಗಲಗುಪ್ಪೆ ಕೃಷ್ಣೇಗೌಡ ಸ್ಪಷ್ಟಪಡಿಸಿದ್ದಾರೆ.
0 ಕಾಮೆಂಟ್‌ಗಳು