ಮೈಸೂರು : ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿದ್ದ ಆರೋಪಿಯನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕರ್ನಾಟಕ ರಾಜ್ಯ ರೈತಸಂಘ(ರೈತಬಣ)ದ ಅಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೇಗೌಡ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಅವರು ಮಾತನಾಡಿ,
ಬಿಹಾರದ ಚಂಪಾರಣ್ ಜಿಲ್ಲೆಯ ವ್ಯಕ್ತಿಯೊಬ್ಬ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಭಾನುವಾರ ಬೆಳಗ್ಗಿನ ಜಾವ ರಸ್ತೆ ಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಾಲಿಗೆ ಮಚ್ಚಿನಲ್ಲಿ ಹೊಡೆದು ಅಮಾನವೀಯವಾಗಿ ನಡೆದುಕೊಂಡಿದ್ದಾನೆ.
ಈತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ೩೨೫ (ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ) ಕಾಯ್ದೆಯಡಿ ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂದಿಸಿದ್ದು,
ಈತ ಮದ್ಯದ ಅಮಲಿನಲ್ಲಿ ದುಷ್ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಪೊಲೀಸರು ಈತನ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು. ‘ಮಾನವೀಯತೆ ಇಲ್ಲದ ಕ್ರೂರಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ. ಮೂಕ ಪ್ರಾಣಿಗಳ ಮೇಲೆ ವಿಕೃತಿ ಮೆರೆದಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು
ಸಚಿವರಾದ ಝಮೀರ್ ಅಹಮದ್ ಖಾನ್ ಅವರು, ತಾವು ನೀಡಿದ್ದ ಭರವಸೆಯಂತೆ ಹಸುಗಳ ಮಾಲೀಕರಾದ ಕರ್ಣ ಅವರಿಗೆ ಭಾನುವಾರವೇ ಮೂರು ಹಸುಗಳನ್ನು ಕೊಡಿಸುವ ಮೂಲಕ ಮಾನವೀಯರೆ ಮೆರೆದಿರುವುದು ಶ್ಲಾಘನೀಯ. ಆದಾಗ್ಯೂ ಮೂಕ ಪ್ರಾಣಿಗಳ ನೋವು ಉಂಟು ಮಾಡಿರುವ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಇಂತಹ ಪುಂಡಾಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
0 ಕಾಮೆಂಟ್‌ಗಳು