ಸಂತ ಫಿಲೋಮಿನಾ ಕಾಲೇಜಿನಲ್ಲಿ 2025ನೇ ಸಾಲಿನ ಪದವಿ ಪ್ರಧಾನ ಸಮಾರಂಭ
ವರದಿ-ನಜೀರ್ ಅಹಮದ್ (9740738219)
ಮೈಸೂರು : ಶಿಕ್ಷಣ ಎಂದರೇ ಕೇವಲ ಜ್ಞಾನ ಸಂಪಾದನೆ ಮಾತ್ರವಲ್ಲ ಉತ್ತಮ ನಡವಳಿಕೆಯೂ ಶಿಕ್ಷಣದ ಒಂದು ಭಾಗ ಇದು ನಿಮ್ಮನ್ನು ನಿಮ್ಮ ನಿಮ್ಮ ಕ್ಷೇತ್ರದಲ್ಲಿ ಸಾಧನೆಯ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಬಿ.ಚಂದ್ರಶೇಖರ ಹೇಳಿದರು.
ಮೈಸೂರಿನ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 2025ನೇ ಸಾಲಿನ ಪದವಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವ ರು ಮಾತನಾಡಿದರು.
ಸ್ವಾತಂತ್ರ್ಯ ಪೂರ್ವದಲ್ಲಿಯೇ ಪ್ರಾರಂಭವಾದ ಸಂತ ಫಿಲೋಮಿನಾ ಕಾಲೇಜು ಅತ್ಯುತ್ತಮ ಶೈಕ್ಷಣಿಕ ಪರಿಸರ ಹೊಂದಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ಇದು ಸ್ಪರ್ಧಾತ್ಮಕ ಯುಗವಾದ್ದರಿಂದ ಕಾಲೇಜುಗಳಲ್ಲಿ ಪಡೆಯುವ ಶಿಕ್ಷಣದ ಸಂಪೂರ್ಣ ಲಾಭವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟು ಅವಕಾಶಗಳು ಇರುವುದರಿಂದ ನಿಮ್ಮ ಮುಂದಿನ ಭವಿಷ್ಯಗಳನ್ನು ನೀವೆ ರೂಪಿಸಿಕೊಳ್ಳಬೇಕು. ಯಾರನ್ನೂ ನೀವು ದೂಷಿಸಬಾರದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳ 426 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಈ ಪೈಕಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ರೆಕ್ಟರ್ ರೆವರೆಂಡ್ ಡಾ.ಲೂರ್ಧ್ ಪ್ರಸಾದ್ ಜೋಸೆಫ್ ಅವರು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಸಂತ ಫಿಲೋಮಿನಾ ಕಾಲೇಜು ಗೀತೆಯನ್ನು ಹಾಡಲಾಯಿತು.
ಪ್ರಾಂಶುಪಾಲರಾದ ಡಾ.ರವಿ ಜೆ.ಡಿ.ಸಲ್ಡಾನ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನ ಶೈಕ್ಷಣಿಗೆ ಪ್ರಗತಿ ಕುರಿತು ವರದಿ ನೀಡಿದರು.
ವಿದ್ಯಾರ್ಥಿಗಳು ಜ್ಞಾನದ ದೀಪವನ್ನು ಹಸ್ತಾಂತರಿಸಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಂತ ಫಿಲೋಮಿನಾ ಕಾಲೇಜು ನಡೆದು ಬಂದ ಹಾದಿ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.
ಐಕ್ಯೂಎಸಿ ಸಂಯೋಜನಕಾರ ಡಾ.ಥಾಮಸ್ ಎ ಗುಣಸೀಲನ್, ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಯಮುನಾ ಮುಂತಾದವರು ಉಪಸ್ಥಿತರಿದ್ದರು.
ವಿಶ್ವ ಪೃಥ್ವಿ ದಿನಾಚರಣೆ: ಕಾರ್ಯಕ್ರಮದಲ್ಲಿ ಗಣ್ಯರು ಸಸಿಗೆ ನೀರೆಯುವ ಮೂಲಕ ವಿಶ್ವ ಪೃಥ್ವಿ ದಿನಾಚರಣೆಯನ್ನು ಆಚರಿಸಿದರು.
ಸಂತ ಫಿಲೋಮಿನಾ ಕಾಲೇಜು ಮೈಸೂರು ಸುತ್ತಮುತ್ತಲಿನ ಪ್ರಾಚೀನ ಮತ್ತು ಗೌರವಾನ್ವಿತ ಸಂಸ್ಥೆಗಳಲ್ಲಿ ಒಂದಾಗಿದ್ದು, ಶೈಕ್ಷಣಿಕ ಶ್ರೇಷ್ಠತೆ ಮತ್ತು ವೈಭವಶಾಲಿ ಪರಂಪರೆಗೆ ಪ್ರಸಿದ್ಧವಾಗಿದೆ. ಕಲೆ, ವಿಜ್ಞಾನ, ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ವಿವಿಧ ಪದವಿ, ಸ್ನಾತಕೋತ್ತರ ಮತ್ತು ಡಿಪ್ಲೊಮಾ ಕೋರ್ಸ್ಗಳನ್ನು ನೀಡುವ ಮೂಲಕ, ಈ ಕಾಲೇಜು ನೈತಿಕ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿ ಹೊಂದಿದ ವಿದ್ಯಾರ್ಥಿಗಳನ್ನು ರೂಪಿಸುತ್ತದೆ. ಈ ನಿಟ್ಟಿನಲ್ಲಿ ಈ ಪದವಿ ಪ್ರಧಾನ ಸಮಾರಂಭವು ಸಮಗ್ರ ವ್ಯಕ್ತಿತ್ವವನ್ನು ಉತ್ತೇಜಿಸಲು ಸಂಸ್ಥೆಯ ಬದ್ಧತೆಯ ಸಾಕ್ಷಿಯಾಗಿದೆ. ಪದವಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ.
ರೆವರೆಂಡ್ ಡಾ.ಲೂರ್ಧ್ ಪ್ರಸಾದ್ ಜೋಸೆಫ್, ರೆಕ್ಟರ್
0 ಕಾಮೆಂಟ್‌ಗಳು