ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ


 ವರದಿ: ನಿಷ್ಕಲ ಎಸ್. ಗೌಡ, ಮೈಸೂರು

ಮೈಸೂರು : ವಿಜಯನಗರದಲ್ಲಿರುವ ಪ್ರಸಿದ್ಧ ಶ್ರೀ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ನೆರವೇರಿತು.

ಮೈಸೂರಿನ ಅನ್ನಪೂರ್ಣ ಕಣ್ಣಿನ ಆಸ್ಪತ್ರೆ, ಸಮೃದ್ಧಿ ಟ್ರಸ್ಟ್ ಮತ್ತು ವೈಟ್ ಸ್ವಾನ್ ಅಸೆಥೆಟಿಕ್ಸ್ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಈ ಶಿಬಿರದಲ್ಲಿ ಕಣ್ಣು ಹಾಗೂ ದಂತ ತಪಾಸಣೆಯನ್ನು ಉಚಿತವಾಗಿ ನೀಡಿ, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲಾಯಿತು.

ದೇವಾಲಯದ ಆಡಳಿತಾಧಿಕಾರಿ ಎನ್. ಶ್ರೀನಿವಾಸನ್ ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, "ಆರೋಗ್ಯವೇ ಮಹಾಸಂಪತ್ತು. ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂದಿನ ವೈದ್ಯರು ದೇವರ ರೂಪದಲ್ಲಿ ಜನರ ಸೇವೆ ಮಾಡುತ್ತಿದ್ದಾರೆ. ಈ ಶಿಬಿರವು ಸಾರ್ವಜನಿಕರಲ್ಲಿ ಆರೋಗ್ಯದ ಮಹತ್ವವನ್ನು ಮನವರಿಕೆ ಮಾಡಿಕೊಡುತ್ತದೆ" ಎಂದು ತಿಳಿಸಿದರು.

ಶಿಬಿರದಲ್ಲಿ ಸುಮಾರು 300ಕ್ಕೂ ಹೆಚ್ಚು ನಾಗರಿಕರು ಭಾಗವಹಿಸಿ ತಪಾಸಣೆಗೊಳಗಾಗಿದ್ದು, ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಯಿತು. ಅನ್ನಪೂರ್ಣ ಕಣ್ಣಿನ ಆಸ್ಪತ್ರೆಯ ವೈದ್ಯರ ತಂಡ, ಸಮೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಸಹನಾ, ವೈಟ್ ಸ್ವಾನ್ ಅಸೆಥೆಟಿಕ್ಸ್‍ನ ದಂತ ವೈದ್ಯೆ ಡಾ. ನಿಷಿಕ ಗೌಡ ಮತ್ತು ಸಿಬ್ಬಂದಿ ವರ್ಗದವರು ಸೇರಿದಂತೆ ಹಲವರು ಭಾಗವಹಿಸಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು