ಮೈಸೂರು ವಾರಿಯರ್ಸ್ ತಂಡ ಪ್ರಕಟಿಸಿದ ಎನ್.ಆರ್. ಗ್ರೂಪ್: ಗಾಯಗೊಂಡಿರುವ ನಾಯಕ ಕರುಣ್ ನಾಯರ್ ಬದಲಿಗೆ ಹಂಗಾಮಿ ನಾಯಕನಾಗಿ ಮನೀಶ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದಾರೆ.


 ವರದಿ: ನಿಷ್ಕಲ ಎಸ್.ಗೌಡ, ಮೈಸೂರು

ಮೈಸೂರು: ಭಾರತದ ಪ್ರಮುಖ ಅಗರಬತ್ತಿ ತಯಾರಕರಾದ ಎನ್‍ಆರ್ ಗ್ರೂಪ್ ಅಧೀನದ ಮೈಸೂರು ವಾರಿಯರ್ಸ್ ಕ್ರಿಕೆಟ್ ತಂಡವು ಮುಂಬರುವ ಮಹಾರಾಜ ಟ್ರೋಫಿ ಕೆಎಸ್‍ಸಿಎ ಟಿ-20 2025 ಪಂದ್ಯಾವಳಿಗೆ 20 ಆಟಗಾರ ಒಳಗೊಂಡ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕರುಣ್ ನಾಯರ್ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.

ಸದ್ಯ ಗಾಯದ ಸಮಸ್ಯೆಗೆ ಸಿಲುಕಿರುವ ನಾಯರ್ ಆರಂಭಿಕ ಕೆಲ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಹಂಗಾಮಿ ನಾಯಕನಾಗಿ ಮನೀಶ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದಾರೆ. ಇತ್ತೀಚೆಗೆ ನಡೆದಿದ್ದ  ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಕಮ್‍ಬ್ಯಾಕ್ ಮಾಡಿರುವ ನಾಯರ್, ದೇಶೀಯ ಕ್ರಿಕೆಟ್‍ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇದೀಗ ಮಹಾರಾಜ ಟ್ರೋಫಿಯಲ್ಲಿ ಅವರ ಮೇಲೆ ನಿರೀಕ್ಷೆಗಳು ಹೆಚ್ಚಾಗಿದ್ದು ನಾಯಕನಾಗಿ ತಂಡವನ್ನು ಹೇಗೆ ಮುನ್ನಡಿಸಲಿದ್ದಾರೆ ಎಂದು ನೋಡಲು ಫ್ಯಾನ್ಸ್‍ಗಳು ಎದುರು ನೋಡುತ್ತಿದ್ದಾರೆ.

ಮಹಾರಾಜ ಟ್ರೋಫಿ ಹಿನ್ನೆಲೆ ಮೈಸೂರು ವಾರಿಯರ್ಸ್ 20 ಆಟಗಾರರನ್ನೊಳಗೊಂಡ ತಂಡನ್ನು ಪ್ರಕಟಿಸಿದೆ. ವಿಶೇಷವೆಂದರೆ ವೇಗಿ ಪ್ರಸಿದ್ಧ್ ಕೃಷ್ಣ, ಮನೀಷ್ ಪಾಂಡೆ ಮತ್ತು ಗೌತಮ್ ಕೆ ಕೂಡ ಮೈಸೂರು ವಾರಿಯರ್ಸ್ ತಂಡದ ಭಾಗವಾಗಿದ್ದಾರೆ. ಮಹಾರಾಜ ಟ್ರೋಫಿ ಪಂದ್ಯಾವಳಿಯು ಆಗಸ್ಟ್ 11 ರಿಂದ 27ರವರೆಗೆ ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ.

ಎಷ್ಟು ತಂಡಗಳು ಭಾಗಿ?: 

ಈ ಪಂದ್ಯಾವಳಿಯಲ್ಲಿ ಒಟ್ಟು 6 ತಂಡಗಳು ಭಾಗಿ ಆಗುತ್ತಿವೆ. ಇದರಲ್ಲಿ ಮೈಸೂರು ವಾರಿಯರ್ಸ್, ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಟ್ರೋಫಿಗಾಗಿ ಸೆಣೆಸಲಿವೆ. ಕ್ರೀಡೆಯ ಮೂಲಕ ಸಮಾಜಕ್ಕೂ ಒಳಿತು ಮಾಡಬೇಕು ಎಂದು ಪಣತೊಟ್ಟಿರುವ ಮೈಸೂರು ವಾರಿಯರ್ಸ್ ತಂಡವು ಇದೀಗ ದಕ್ಷಿಣ ಏಷ್ಯಾದ ಮೊದಲ ವೀಲ್‍ಚೇರ್ ಕ್ರಿಕೆಟ್ ಎಬಿಲಿಟಿ ಸ್ಪೋಟ್ರ್ಸ್ ಲೀಗ್ (ಎಎಸ್‍ಎಲ್) ಜೊತೆ ಕೈ ಜೋಡಿಸಿದೆ. ಈ ಮೂಲಕ ವಿಕಲಚೇತನ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ನೆರವಾಗಲು ಮುಂದಾಗಿದೆ.

ದೇಣಿಗೆ: ಕಳೆದ ವರ್ಷದಂತೆಯೇ ಈ ವರ್ಷವೂ ಎನ್‍ಆರ್ ಗ್ರೂಪ್ ಸಂಸ್ಥೆಯು ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಆಟಗಾರರು ತೆಗೆಯುವ ಪ್ರತೀ ವಿಕೆಟ್‍ಗೆ 2000, ಪ್ರತೀ ಸಿಕ್ಸರ್‍ಗೆ 1000 ಮತ್ತು ಪ್ರತಿ ಫೆÇೀರ್‍ಗೆ 500 ದೇಣಿಗೆ ನೀಡಲಿದೆ. ಇದು ವಿಕಲಚೇತನ ಕ್ರೀಡಾಪಟುಗಳ ಸಬಲೀಕರಣಕ್ಕೆ ಬಳಕೆಯಾಗಲಿದೆ.

ಈ ಕುರಿತು ಮಾತನಾಡಿರುವ ಮೈಸೂರು ವಾರಿಯರ್ಸ್ ತಂಡದ ಮಾಲೀಕ ಮತ್ತು ಸೈಕಲ್ ಪ್ಯೂರ್ ಅಗರ್‍ಬತ್ತಿಯ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗಾ, "ಕರುಣ್ ನಾಯರ್ ಅವರನ್ನು ನಮ್ಮ ತಂಡದ ನಾಯಕರನ್ನಾಗಿ ಘೋಷಿಸಲು ಸಂತೋಷ ಪಡುತ್ತೇವೆ. ಅವರ ಅನುಭವ ನಮ್ಮ ತಂಡಕ್ಕೆ ಹೆಚ್ಚಿನ ಬಲ ನೀಡಲಿದೆ. ಅಲ್ಲದೇ ಈ ಬಾರಿಯ ಮಹಾರಾಜ ಟ್ರೋಫಿಯನ್ನು ಮೈಸೂರಿನಲ್ಲಿ ಆಯೋಜಿಸಲು ನಾವು ಉತ್ಸುಕರಾಗಿದ್ದೇವೆ. ಮೈಸೂರಿನಲ್ಲಿ ಪಂದ್ಯಾವಳಿ ನಡೆಯುತ್ತಿರುವುದು ನಮ್ಮ ಫ್ರಾಂಚೈಸ್‍ಗೆ ಮಹತ್ವದ ಕ್ಷಣವಾಗಿದ್ದು, ಈ ಸಲವೂ ಟ್ರೋಫಿಯನ್ನು ನಾವೇ ಗೆಲ್ಲುವ ನಂಬಿಕೆ ಇದೆ" ಎಂದಿದ್ದಾರೆ.

ಮೈಸೂರು ವಾರಿಯರ್ಸ್ ತಂಡದ ಮುಖ್ಯ ಕೋಚ್ ಆರ್.ಎಕ್ಸ್.ಮುರಳಿ, "ನಮ್ಮ ತಂಡದ ಪ್ರತೀ ಆಟಗಾರರೂ ಹುಮ್ಮಸ್ಸಿನಿಂದ ಪ್ರದರ್ಶನ ನೀಡಲು ಕಾತರರಾಗಿದ್ದಾರೆ. ನಮ್ಮ ತಂಡದ ಅಭಿಮಾನಿಗಳಿಗಾಗಿ ನಾವು ಈ ಸಲವೂ ಅತ್ಯುತ್ತಮ ಪ್ರದರ್ಶನವನ್ನು ನೀಡಲಿದ್ದೇವೆ" ಎಂದು ತಿಳಿಸಿದ್ದಾರೆ. 

ಮೈಸೂರು ವಾರಿಯರ್ಸ್ ತಂಡದ ನಾಯಕರಾದ ಕರುಣ್ ನಾಯರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, "ಮೈಸೂರು ವಾರಿಯರ್ಸ್ ತಂಡವನ್ನು ಮುನ್ನಡೆಸುವ ಅವಕಾಶ ಮತ್ತೊಮ್ಮೆ ಸಿಕ್ಕಿರುವುದಕ್ಕೆ ಅಭಾರಿಯಾಗಿದ್ದೇನೆ. ನಮ್ಮ ತಂಡವು ಹೊಸ ಪ್ರತಿಭೆಗಳು ಮತ್ತು ಅನುಭವಿ ಆಟಗಾರರ ಮಿಶ್ರಣವನ್ನು ಹೊಂದಿದೆ. ನಮ್ಮ ತಂಡದ ಅಭಿಮಾನಿಗಳಿಗಾಗಿ ಅತ್ಯುತ್ತಮ ಪ್ರದರ್ಶನವನ್ನು ನೀಡುವ ವಿಶ್ವಾಸ ನಮಗಿದೆ" ಎಂದರು. 

ಪ್ರಾಯೋಜಕತ್ವ: 

ಈ ಆವೃತ್ತಿಯ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡಕ್ಕೆ ಬ್ಯಾಟ್ ಬ್ರಿಕ್ಸ್7, ಕ್ಯಾಂಪಾ, ಸಂಕಲ್ಪ, 360 ಒನ್, ಸಿಂಪೆÇೀಲೊ, ಕೊನೆ ಮತ್ತು ಭಾರತ್ ಇಂಟರ್‍ನ್ಯಾಷನಲ್ ಟ್ರಾವೆಲ್ಸ್ (ಬಿಐಟಿ) ಪ್ರಾಯೋಜಕತ್ವ ಒದಗಿಸಿವೆ.

 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು