ಮೈಸೂರು: ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ಹಾಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ನಾಡು ಕಂಡಂತಹ ಮೇರು ವ್ಯಕ್ತಿತ್ವದ ರಾಜಕಾರಣಿ ಅವರು ಕರ್ನಾಟದ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಮಂಡ್ಯ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸುರೇಶ್ ಕಂಠಿ ಅವರು ಹೇಳಿದರು.
ಕಲಾಮಂದಿರದಲ್ಲಿ ಸೋಮವಾರ ನಡೆದ ಪರಮೋತ್ಸವ ಕಾರ್ಯಕ್ರಮಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಡಾ.ಜಿ.ಪರಮೇಶ್ವರ ಅವರ ೪೫ ವರ್ಷಗಳ ಸುಧೀರ್ಘ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕಾರಣ ಮಾಡಿದ್ದಾರೆ, ೮ ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಮೂರು ಬಾರಿ ಗೃಹ ಸಚಿವರಾಗಿ ಇತಿಹಾಸ ಸೃಷ್ಟಿಸಿದ್ದಾರೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಅವರನ್ನು ಪ್ರೀತಿಸುವ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಅವರು ಉನ್ನತ ಸಚಿವರಾಗಿದ್ದ ಸಂದರ್ಭದಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಉಪ ಕುಲಪತಿಗಳನ್ನು ನೇಮಕ ಮಾಡಿದ್ದರು. ಅವರ ಸಾವಿರಾರು ಅಭಿಮಾನಿಗಳು ಸೇರಿ ಪರಮೋತ್ಸವ ಅಭಿನಂದನಾ ಕಾರ್ಯಕ್ರಮ ಆಚರಿಸಿದ್ದು, ಡಾ.ಪರಮೇಶ್ವರ ಅವರ ಶ್ರಮ, ಸೇವೆ, ವ್ಯಕ್ತಿತ್ವ ಎಲ್ಲವನ್ನೂ ಹೈಕಮಾಂಡ್ ಪರಿಗಣಿಸಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಖಂಡಿತಾ ನೀಡುತ್ತದೆ ಎಂದರು.
0 ಕಾಮೆಂಟ್‌ಗಳು