ಗಾಂಧಿ ವೃತ್ತದಲ್ಲಿ ನಡೆದ ಕ್ಯಾಂಡಲ್ ಲೈಟ್ ಮಾರ್ಚ್‌ನಲ್ಲಿ ಕಾಂಗ್ರೆಸ್ ಪಕ್ಷದ ಮೈಸೂರು ಜಿಲ್ಲಾ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಅಧ್ಯಕ್ಷ ಎಂ.ರಸೂಲ್ ಭಾಗಿ
ಮೈಸೂರು : ದೇಶಾದ್ಯಂತ ಮತಗಳ್ಳತನದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಮೈಸೂರಿನಲ್ಲೂ ’ಓಟ್ ಚೋರಿ ಗದ್ದಿ ಛೋಡ್’ ಕಾರ್ಯಕ್ರಮದ ಅಂಗವಾಗಿ ಕ್ಯಾಂಡಲ್ ಲೈಟ್ ಮಾರ್ಚ್ ಯಶಸ್ವಿಯಾಗಿ ನೆರವೇರಿತು.
ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ನೇತೃತ್ವದಲ್ಲಿ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಗುರುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೈಸೂರು ಕಾಂಗ್ರೆಸ್ ಪಕ್ಷದ ಮೈಸೂರು ಜಿಲ್ಲಾ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಅಧ್ಯಕ್ಷರಾದ ಎಂ.ರಸೂಲ್ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷವು ದೇಶಾದ್ಯಂತ ಮತಗಳ್ಳತನ ಮಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಇದನ್ನು ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾಕ್ಷಿ ಸಮೇತ ಸಾಬೀತುಪಡಿಸಿದ್ದಾರೆ. ಅಲ್ಲದೇ ಮೃತರಾಗಿದ್ದಾರೆ ಎಂದು ಮತದಾರ ಪಟ್ಟಿಯಿಂದ ತೆಗೆದು ಹಾಕಿದ ವ್ಯಕ್ತಿಗಳು ಜೀವಂತವಾಗಿರುವುದನ್ನೂ ಸಹ ಸಾಬೀತು ಮಾಡಿದ್ದಾರೆ. ಮತಗಳ್ಳತನ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ಕೃತ್ಯವಾಗಿದೆ. ಇಂತಹ ಸಂವಿಧಾನ ವಿರೋದಿ ಚಟುವಟಿಕೆ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಮುಂದುವರೆಯುವ ನೈತಿಕ ಹಕ್ಕಿಲ್ಲ ಎಂಬ ರಾಹುಲ್ ಗಾಂಧಿ ಅವರ ವಾದವನ್ನು ನಾವು ಅಕ್ಷರಶಃ ಸಮರ್ಥಿಸುತ್ತೇವೆ ಎಂದರು.
0 ಕಾಮೆಂಟ್‌ಗಳು