ವಿಜಯನಗರದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಪ್ರರಿಂದ ಸಾಮೂಹಿಕ ಋಗ್ವೇದ ಹಾಗೂ ಯಜುರುಪಾಕರ್ಮ

ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವ: ಎನ್ ಶ್ರೀನಿವಾಸನ್

 ವರದಿ: ನಿಷ್ಕಲ ಎಸ್.ಗೌಡ, ಮೈಸೂರು

ಮೈಸೂರು: ವಿಜಯನಗರದಲ್ಲಿರುವ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಪ್ರರಿಂದ ಸಾಮೂಹಿಕ ಋಗ್ವೇದ ಹಾಗೂ ಯಜುರುಪಾಕರ್ಮ ಸಾಮೂಹಿಕವಾಗಿ ಬ್ರಾಹ್ಮಣರು ಯಜ್ಞೋ ಪವಿತ್ರಂ ಜನಿವಾರ ಬದಲಾಯಿಸಿಕೊಂಡು, ಸಂಧ್ಯಾವಂದನೆ, ಗಾಯತ್ರಿ ಜಪ,  ನೆರೆವೇರಿಸುವ ಮೂಲಕ ಆಚರಿಸಿದರು

 ಈ ಸಂದರ್ಭದಲ್ಲಿ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿ ಎನ್. ಶ್ರೀನಿವಾಸನ್ ಮಾತನಾಡಿ, ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ, 8ನೇ ವರ್ಷಕ್ಕೆ ವಟುವಿಗೆ ಉಪನಯನ ಮಾಡಿ ಗಾಯತ್ರಿ ಮಂತ್ರ ಉಪದೇಶಿಸಿ ಗುರುಕುಲಕ್ಕೆ ಕಳಿಸುವ ಪರಂಪರೆಯಿತ್ತು, ಯಜುರ್ ವೇದ ಋಗ್ವೇದ ಪ್ರಕಾರವಾಗಿ ಶಾಸ್ತ್ರಗಳನ್ನ ಪಾಲಿಸುವ ವೈದೀಕರು ತಮ್ಮ ಋಷಿಗಳಿಗೆ ಪೂಜಿಸಿ ಯಜ್ಞೋಪವೀತ ಜನಿವಾರ ಧಾರಣೆ ಮಾಡುವ ಉಪಾಕರ್ಮ ಧರ್ಮರಕ್ಷಣೆಯ ಪ್ರತೀಕವಾಗಿದೆ, ಸಾವಿರಾರು ವರ್ಷಗಳ ಹಿಂದೆ ಸಂವತ್ಸರಗಳ ಹಬ್ಬಗಳಲ್ಲಿ ಪಂಚಾಂಗ ನಿರ್ಣಯಿಸಿರುವಂತೆ ಮಹೂರ್ತ ಆಚರಣೆ ಪಾಲಿಸುವ ಕ್ರಮಕ್ಕೆ ಮೊದಲೇ ನಿಶ್ಚಯಿಸಿರುತ್ತದೆ ಎಂದರೆ ಸನಾತನ ಧರ್ಮದ ಶಕ್ತಿಯ ಸಂಕೇತವಾಗಿದೆ ಎಂದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಗಿರೀಶ್, ಅಶ್ವಿನ್, ಶ್ರೀರಾಮ್ ಇನ್ನಿತರರು ಇದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು