ಕಾಂಗ್ರೆಸ್ ಪಕ್ಷದಿಂದ ಜಿ.ವಿ.ಸೀತಾರಾಂ ಉಚ್ಛಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರ್ಧಾರವನ್ನು ಸ್ವಾಗತಿಸಿದ ಇಂಗಲಗುಪ್ಪೆ ಕೃಷ್ಣೇಗೌಡ


 ವರದಿ: ನಿಷ್ಕಲ ಎಸ್.ಗೌಡ, ಮೈಸೂರು

ಬೆಂಗಳೂರು: ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಡಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರಮಾಪ್ತ, ಕಾಂಗ್ರೆಸ್ ಮುಖಂಡ ಜಿ.ವಿ ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದ್ದು, ಕರ್ನಾಟಕ ರಾಜ್ಯ ರೈತಸಂಘದ(ರೈತಬಣ) ಅಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೇಗೌಡ ಸ್ವಾಗತಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಜಿ.ವಿ.ಸೀತಾರಾಮ್ ಒಂದು ಸಮುದಾಯದ ಮುಖಂಡರಾಗಿದ್ದು, ತಮ್ಮ ವೈಯುಕ್ತಿಕ ವ್ಯವಹಾರದಿಂದ ಯಾರೋ ಒಬ್ಬರ ವಿರುದ್ಧ ಮಾತನಾಡುವ ಭರದಲ್ಲಿ ಇಡೀ ಒಕ್ಕಲಿಗ ಸಮುದಾಯವನ್ನು ನಿಂದಿಸಿ ಮಾತನಾಡಿದ್ದು, ತಪ್ಪು, ನಮ್ಮ ಸಂಘಟನೆಯ ಹೋರಾಟದ ಫಲವಾಗಿ ಜಿ.ವಿ.ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷ 6 ವರ್ಷಗಳ ಕಾಲ ಉಚ್ಚಾಟಿಸಿದೆ. ಅಲ್ಲದೇ, ಜಿ.ವಿ. ಸೀತಾರಾಮ್ ಅವರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಸಹ ರದ್ದುಗೊಳಿಸಲಾಗಿದೆ. ಈ ಕ್ರಮಕ್ಕೆ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸುತ್ತೇನೆ. ಇದು ಯಾವುದೇ ಸಮುದಾಯ ಕುರಿತು ಅವಹೇಲನವಾಗಿ ಮಾತನಡುವವರಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ. ಇನ್ನು ಪೊಲೀಸರೂ ಸಹ ಅವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ಜಿ.ವಿ.ಸೀತಾರಾಮ್ ಅವರನ್ನು ಮೈಸೂರು ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ನಾವು ಆಗ್ರಹಿಸುತ್ತೇವೆ ಎಂದು ಕೃಷ್ಣೇಗೌಡ ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು