ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್‍ಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಮೇದಾರ್ ಬ್ಲಾಕ್ನಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಕುಮಾರ್ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ ನಡೆಯಿತು.
ಮೇದಾರ್ ಬ್ಲಾಕ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಉಚಿತ ಶ್ರವಣ ತಪಾಸಣಾ ಶಿಬಿರದಲ್ಲಿ ಬಡಾವಣೆಯ ಸಾರ್ವಜನಿಕರು, ಹಿರಿಯ ನಾಗರಿಕರು ಮತ್ತು ಮೇದಾರ್ ಬ್ಲಾಕ್ ಸರ್ಕಾರಿ ಪ್ರೌಢಶಾಲೆಯ 80 ವಿದ್ಯಾರ್ಥಿಗಳು ತಪಾಸಣೆಗೆ ಒಳಗಾದರು.
ಈ ಸಂದರ್ಭದಲ್ಲಿ ಮೇದಾರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುಮಾರ್ ಅವರು ಮಾತನಾಡಿ, ಶಾಸಕರಾದ ಹರೀಶ್‍ಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಳೆದ ಮೂರ್ನಾಲ್ಕು ದಿನಗಳಿಂದ ಚಾಮರಾಜ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಬೆಂಗಳೂರಿನ ಡಾ.ಎಸ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆ ಮತ್ತು ಲಯನ್ಸ್ ಕ್ಲಬ್ ಇಂಟರ್‍ನ್ಯಾಷನಲ್ ಸಂಸ್ಥೆಯ ಸಹಯೋಗದೊಂದಿಗೆ ಉಚಿತವಾಗಿ ಶ್ರವಣ ಪರೀಕ್ಷೆ ನಡೆಸಲಾಗುತ್ತಿದೆ. ಅಗತ್ಯವಿದ್ದವರಿಗೆ ಶ್ರವಣ ಯಂತ್ರವನ್ನು ಕೊಡು ವ್ಯವಸ್ಥೆ ಮಾಡಲಾಗಿದೆ. ನಮ್ಮ ಕ್ಷೇತ್ರದ ಶಾಸಕರು ಸಹ ಸಮಾಜಮುಖಿಯಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ಹಿನ್ನಲೆ ನಾವೂ ಕೂಡ ಅವರ ಬೆನ್ನೆಲುಬಾಗಿ ನಿಂತು ಸಮಾಜಮುಖಿ ಕಾರ್ಯದಲ್ಲಿ ಕೈ ಜೋಡಿಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮೈಸೂರು ಮಹಾನಗರಪಾಲಿಕೆ ನಾಮನಿರ್ದೇಶಕ ಸದಸ್ಯರಾದ ಬಾಲರಾಜು, 24ನೇ ವಾರ್ಡ್ ಅಧ್ಯಕ್ಷರಾದ ಮೊಹಮ್ಮದ್ ಇಮ್ರಾನ್, ತಂಬಿ, ಶರಣಪ್ಪ, ಮೇದಾರ್ ಬ್ಲಾಕ್ ಸರ್ಕಾರಿ ರೌಢಶಾಲೆ ದೈಹಿಕ ಶಿಕ್ಷಕರಾದ ಸೋಮಣ್ಣ ಮತ್ತಿತರರು ಇದ್ದರು.
0 ಕಾಮೆಂಟ್‌ಗಳು