ವರದಿ : ನಿಷ್ಕಲ ಎಸ್.ಗೌಡ, ಮೈಸೂರು
ಮೈಸೂರು : ಮೈಸೂರು ನಗರದ ಹಿರಿಯ ಕಾಂಗ್ರೆಸ್ ಮುಖಂಡ, ಉತ್ತಮ ಸಂಘಟಕ ಎಸ್.ನಾಗರಾಜು (ಟಿಂಬರ್ ನಾಗರಾಜು) ಅವರನ್ನು ಮೈಸೂರು ನಗರ, ಜಿಲ್ಲಾ ಕಾಂಗ್ರೆಸ್ಸಿನ ಕುಶಲಕರ್ಮಿಗಳ ವಿಭಾಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ, ನೇಮಕ ಮಾಡಲಾಗಿದೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿಯ ಕುಶಲಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್.ಪ್ರಸನ್ನಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಟಿಂಬರ್ ನಾಗರಾಜು ಮಾತನಾಡಿ, ನನ್ನ ನೇಮಕಾತಿಗೆ ಕೆಪಿಸಿಸಿ ರಾಜ್ಯಾಧ್ಯಕ್ಷರು ಮತ್ತು ಉಪ ಮುಖ್ಯಮಂತ್ರಿಗಳೂ ಆದ ಡಿ.ಕೆ.ಶಿವಕುಮಾರ್ ಅವರು, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಮೂರ್ತಿ ಮತ್ತು ಮುಡಾ ಮಾಜಿ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಅವರು ಸಹಕರಿಸಿದ್ದಾರೆ ಇವರಿಗೆ ಧನ್ಯವಾದಗಳು.
ಕಾಂಗ್ರೆಸ್ ಪಕ್ಷದ ಕುಶಲಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್ ಅವರ ಮಾರ್ಗದರ್ಶನದಲ್ಲಿ ನನಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ. ಕಾಂಗ್ರೆಸ್ ಪಕ್ಷಕ್ಕೆ ಕುಶಲಕರ್ಮಿಗಳ ಹೆಚ್ಚು ಹೆಚ್ಚು ಸೇರ್ಪಡೆ ಮಾಡುವ ಮೂಲಕ ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದರು.

