ವರದಿ : ನಿಷ್ಕಲ ಎಸ್.ಗೌಡ, ಮೈಸೂರು
ಮೈಸೂರು : ನಗರದ ವಿವಿಧ ಉದ್ಯಾನವನಗಳಲ್ಲಿ 75 ಸಸಿಗಳನ್ನು ನೆಟ್ಟು, ಪರಿಸರ ಸಂರಕ್ಷಣೆ ಮಾಡುವ ಮೂಲಕ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಶಾಸಕ ಜಿ.ಟಿ.ದೇವೇಗೌಡರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಬಿ.ಬಿ.ರೇಜಶೇಖರ್ ಮಾತನಾಡಿ, ಶಾಸಕರು ಮತ್ತು ಮಾಜಿ ಸಚಿವರೂ ಆದ ಜಿ.ಟಿ.ದೇವೇಗೌಡರು ಅಜಾತ ಶತೃವಾಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ಯಾವುದೇ ಜಾತಿ, ಧರ್ಮ, ವರ್ಣ, ವರ್ಗಗಳ ಬೇದವಿಲ್ಲದೇ ಎಲ್ಲರನ್ನೂ ಸರಿ ಸಮಾನವಾಗಿ ಕಂಡು ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಹಿರಿಯ ಸಹಕಾರಿ ಧುರೀಣರೂ ಆದ ಜಿ.ಟಿ.ದೇವೇಗೌಡರ 75ನೇ ವರ್ಷದ ಹುಟ್ಟು ಹಬ್ಬವನ್ನು 75 ಸಸಿಗಳನ್ನು ನೆಡುವ ಮೂಲಕ ಕನ್ನಡಾಂಬೆ ರಕ್ಷಣಾ ವೇದಿಕೆ ಜಿಟಿಡಿ ಅವರಂತಹ ಮುತ್ಸದಿ ರಾಜಕಾರಣಿಯ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ ಎಂದರು. ಬಳಿಕ ಅವರು ಜಿ.ಟಿ.ದೇವೇಗೌಡರ ಮನೆಗೆ ಬಂದು ಕೇಕ್ ಕತ್ತರಿಸಿ ಜಿಟಿಡಿ ಅವರನ್ನು ಗೌರವಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು.
ದೇವರಾಜ ಅರಸು, ಸಿದ್ದರಾಮಯ್ಯ ಬಿಟ್ಟರೆ ಮೈಸೂರು ಭಾಗದ ಅತ್ಯಂತ ಪ್ರಭಾವಿ ರಾಜಕಾರಣಿಯಾದ ಜಿ.ಟಿ.ದೇವೇಗೌಡರು ಎಲ್ಲರನ್ನೂ ಪ್ರೀತಿ ಪೂರ್ವಕವಾಗಿ ಕಾಣುತ್ತಾ ಕ್ಷೇತ್ರದ ಅಭಿವೃದ್ಧಿ ಮಾಡುತ್ತಿದ್ದಾರೆ. ನಮ್ಮ ಸಂಘಟನೆಯಿAದ ಈರಪ್ಪನಕೊಪ್ಪಲು ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ ಮತ್ತು ಹೆರಿಗೆ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ಸಹ ವಿತರಣೆ ಸಹ ಮಾಡಲಾಗಿದೆ.
• ಬಿ.ಬಿ.ರಾಜಶೇಖರ್, ಅಧ್ಯಕ್ಷರು, ಕನ್ನಡಾಂಬೆ ರಕ್ಷಣಾ ವೇದಿಕೆ





