ಸಮಾಜ ಸೇವಕ, ಕನ್ನಡಪರ ಹೋರಾಟಗಾರ ಡಾ.ರದಿವುಲ್ಲಾ ಖಾನ್‍ಗೆ ರಾಜ್ಯೋತ್ಸವ ಪ್ರಶಸ್ತಿ


 ಮೈಸೂರು: ಸಮಾಜ ಸೇವಕರು, ಕನ್ನಡಪರ ಹೋರಾಟಗಾರರೂ ಮತ್ತು ಸಂಘಟಕರೂ ಆದ ಡಾ. ರದಿವುಲ್ಲಾ ಖಾನ್ ಅವರಿಗೆ 2025ನೇ ಸಾಲಿನ ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ


.ಶನಿವಾರ ಬೆಳಗ್ಗೆ ನಗರದ ಓವಲ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವರು ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಹೆಚ್.ಸಿ.ಮಹದೇವಪ್ಪ ಅವರು ಡಾ.ರದಿ ಉಲ್ಲಾ ಖಾನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಡಾ.ರದಿ ಉಲ್ಲಾ ಖಾನ್ ಅವರು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯಾಗಿ ಕನ್ನಡ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಕನ್ನಡ ಬಾರದ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆಯ ಪ್ರೋತ್ಸಾಹ ನೀಡುವುದು ಇವರ ದಿನನಿತ್ಯದ ಕಾಯಕವಾಗಿದೆ. ಕನ್ನಡಪರ ಹೋರಾಟಗಾರರೂ ಆಗಿರುವ ರದಿವುಲ್ಲಾ ಖಾನ್ ಕಳೆದ ಹಲವು ವರ್ಷಗಳಿಂದ ಅವಿರತವಾಗಿ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

 ಮೈಸೂರಿನ ಖ್ಯಾತ ಫಾರೂಖಿಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರದಿವುಲ್ಲಾ ಖಾನ್ ಅವರ ಅಪಾರ ಸಮಾಜ ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ ಇವರಿಗೆ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದೆ.