ಕಾರ್ಮಿಕ ದಿನಾಚರಣೆ ಅಂಗವಾಗಿ ನೂರಾರು ಮಹಿಳೆಯರಿಗೆ ಸೀರೆ ವಿತರಿಸಿದ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಾಬೀರ್

 ವರದಿ : ನಿಷ್ಕಲ ಎಸ್., ಮೈಸೂರು

ಮೈಸೂರು : ನೂರಾರು ಮಹಿಳೆಯರಿಗೆ ಸೀರೆ ವಿತರಣೆ ಮಾಡುವ ಮೂಲಕ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಾಬೀರ್ ಅವರು ಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ನಗರದ ರಿಂಗ್ ರಸ್ತೆಯಲ್ಲಿರುವ ಆರ್‌ಟಿಓ ಕಚೇರಿ ಸಮೀಪ ನಡೆದ ಕಾರ್ಮಿಕ ದಿನಾಚರಣೆ ಸಮಾರಂಭವನ್ನು ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್ ಎಕ್ಬಾಲ್ ಅವರು ಉದ್ಘಾಟಿಸಿ ಮಾತನಾಡಿ, ಮೊಹಮ್ಮದ್ ಸಾಬೀರ್ ಅವರು, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದು, ಇಂದು ಅವರ ನೇತೃತ್ವದಲ್ಲಿ ನೂರಾರು ಕಾರ್ಮಿಕ ಮಹಿಳೆಯರಿಗೆ ಸೀರೆಗಳನ್ನು ವಿತರಣೆ ಮಾಡಿ ಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುವುದರ ಜತೆಗೆ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುತ್ತಿದ್ದಾರೆ. ಇದೇ ರೀತಿ ಸೇವಾ ಕಾರ್ಯಗಳ ಮೂಲಕ ಶಾಸಕರಾದ ತನ್ವೀರ್ ಸೇಠ್ ಅವರ ನೇತೃತ್ವದಲ್ಲಿ ಪಕ್ಷವನ್ನು ಸಂಘಟನೆ ಮಾಡುತ್ತಿರಲಿ, ಎಲ್ಲ ಸಂದರ್ಭದಲ್ಲೂ ನಾವು ಅವರಿಗೆ ಸಹಾಯ ಮಾಡುತ್ತೇವೆ ಎಂದರು.

ಸಮಾರAಭದ ಅಧ್ಯಕ್ಷತೆ ವಹಿಸಿದ್ದ ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ರೇಹಾನ್ ಬೇಗ್ ಅವರು ಮಾತನಾಡಿ, ಮೊಹಮ್ಮದ್ ಸಾಬೀರ್ ಅವರು ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾದ ಕೂಡಲೇ ಕಾರ್ಮಿಕ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ. ಇಂದು ನೂರಾರು ಮಹಿಳೆಯರಿಗೆ ಆರೋಗ್ಯ ತಪಾಸಣೆ ಮಾಡಿಸುವುದರ ಜತೆಗೆ ಅವರಿಗೆ ಉಡುಗೋರೆಯನ್ನು ಕೊಟ್ಟು ಗೌರವಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷವನ್ನು ಸಂಘಟನಾತ್ಮಕವಾಗಿ ಕಟ್ಟುವ ಆಲೋಚನೆ ಮಾಡಿರುವುದು ಸಂತಸ ತಂದಿದೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಜಾಬೀರ್ ಅವರು ಮಾತನಾಡಿ, ಕಾರ್ಮಿಕ ದಿನಾಚರಣೆ ಪ್ರಯುಕ್ತ ಮಹಿಳಾ ಕಾರ್ಮಿಕರನ್ನು ಗೌರವಿಸಿ ಅವರಿಗೆ ಉಡುಗೋರೆ ನೀಡಿರುವುದು ನನಗೆ ಸಂತೋಷ ತಂದಿದೆ, ಮುಂದಿನ ವರ್ಷ ಇನ್ನೂ ದೊಡ್ಡದಾಗಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ಕೆಪಿಸಿಸಿ ಸಂಯೋಜಕರಾದ ಶೌಕತ್ ಅಲಿಖಾನ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಮೊಹಮ್ಮದ್ ಶಿಫ್ಟನ್, ಉಪಾಧ್ಯಕ್ಷರಾದ ಮೊಹಮ್ಮದ್ ಸಿದ್ದೀಖ್ ಮುಂತಾದವರು ಇದ್ದರು.