ಮೈಸೂರು: ಹನ್ನೇರಡನೆ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಆಶಯದಂತೆ ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆಡಳಿತ ನಡೆಸಿದರು ಎಂದು ರಾಜವಂಶಸ್ಥರೂ ಆದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಕನ್ನಡಾಂಬೆ ರಕ್ಷಣಾ ವೇದಿಕೆಯ 6ನೇ ವಾರ್ಷಿಕೋತ್ಸವ ಅಂಗವಾಗಿ ಖಿಲ್ಲೆ ಮೊಹಲ್ಲಾದ ಶ್ರೀ ನಟರಾಜ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಬಸವ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ, ಪೌರಕಾರ್ಮಿಕರಿಗೆ ಉಚಿತ ಬಟ್ಟೆ ವಿತರಣೆ, ಸಹಪಂಕ್ತಿ ಭೋಜನ, ಸರ್ಕಾರಿ ಶಾಲೆಯ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ, ಸಮಾನತೆ ಹಾಗೂ ಎಲ್ಲರಿಗೂ ಅವಕಾಶ ಕಲ್ಪಿಸುವುದು ಬಸವಣ್ಣನವರ ಆಶಯವಾಗಿತ್ತು. ಅದರಂತೆ ನಾಲ್ವಡಿಯವರು ಒಳ್ಳೆಯ ಆಡಳಿತ ನೀಡಿದರು ಎಂದು ಸ್ಮರಿಸಿದರು.
ಬಸವಣ್ಣನವರು ಸೇರಿದಂತೆ ಎಲ್ಲಾ ಆಚಾರ್ಯರು, ಗುರುಗಳು, ತಪಸ್ವಿಗಳು ಸಮಾಜದ ಏಳಿಗೆಗೆ ಕೆಲಸ ಮಾಡಿದವರು. ಬಸವಣ್ಣನವರ ವಚನಗಳು ಸರಳವಾಗಿದ್ದು, ಇವತ್ತಿನ ದಿನಮಾನಗಳಿಗೂ ಪ್ರಸ್ತುತವಾಗಿವೆ ಎಂದು ಅವರು ಹೇಳಿದರು.
ಪೌರ ಕಾರ್ಮಿಕರು ನಗರದ ಸ್ವಚ್ಛತೆಗಾಗಿ ಪ್ರತಿನಿತ್ಯ ಶ್ರಮಿಸುತ್ತಿದ್ದಾರೆ. ಅದೇ ರೀತಿ ಸರ್ಕಾರಿ ಶಾಲೆಯ ಮಕ್ಕಳನ್ನು ಗುರುತಿಸಿ, ಪುರಸ್ಕರಿಸುತ್ತಿರುವುದು ಉತ್ತಮ ಕಾರ್ಯ. ಈ ರೀತಿಯ ಉತ್ತೇಜಿಸುವ ಮೂಲಕ ಒಳ್ಳೆಯ ಭಾರತ ನಿರ್ಮಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಅರ್ಜುನ ಅವಧೂತ ಗುರೂಜಿ ಮಾತನಾಡಿ, ಕನ್ನಡ ಎಂದರೇ ವಿಶಾಲತೆ, ವಾತ್ಸಲ್ಯ, ತಾಯ್ತನ. ನಾವೆಲ್ಲರೂ ಕನ್ನಡಾಂಬೆಯ ಮಕ್ಕಳು. ಎಲ್ಲರೂ ಸೇರಿ ಕನ್ನಡವನ್ನು ಬೆಳೆಸಬೇಕು ಎಂದರು.
ಬಸವಣ್ಣನವರು ಹೇಳಿದ ಕಾಯಕವೇ ಕೈಲಾಸ ಎಂಬAತೆ ಪೌರ ಕಾರ್ಮಿಕರು ತಮ್ಮ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿಯೇ ದೇವರನ್ನು ಕಾಣಬಹುದು ಎಂದು ಹೇಳಿದರು.
ಕಾರ್ಯಕ್ರಮವನ್ನು ಸಂಸ್ಕöÈತಿ ಚಿಂತಕ ಶಂಕರ ದೇವನೂರು ಉದ್ಘಾಟಿಸಿ ಮಾತನಾಡಿ, ಕನ್ನಡ ಎಂಬುದು ಅರಿವಿನ ಜ್ಯೋತಿ, ಬಸವಣ್ಣನವರದು ಮಾನವೀಯತೆ ಚಿಂತನೆಯಾಗಿತ್ತು. ನಾಲ್ವಡಿಯವರು ಶಿಕ್ಷಣಕ್ಕೆ ಒತ್ತು ನೀಡಿದರು ಎಂದು ಹೇಳಿದರು.
ಪ್ರಾದೇಶಿಕ ಆಯುಕ್ತರ ಕಚೇರಿಯ ಹೆಚ್ಚುವರಿ ಆಯುಕ್ತ ಡಾ.ಪಿ. ಶಿವರಾಜು, ಸಾಹಿತಿ ಡಾ.ಎಸ್. ಶಿವರಾಜಪ್ಪ ಮಾತನಾಡಿದರು. ಬಿಜೆಪಿ ಮುಖಂಡ ಕವೀಶ್ ಗೌಡ ಹಾಗೂ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮುಖ್ಯ ಅತಿಥಿಗಳಾಗಿದ್ದರು.
ಕನ್ನಡಾಂಬೆ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಬಿ.ಬಿ. ರಾಜಶೇಖರ್ ಪ್ರಾಸ್ತಾವಿಕ ಭಾಷಣ ಮಾಡಿ, ಕಳೆದ ಆರು ವರ್ಷಗಳಿಂದ ಮಾಡಿರುವ ಹೋರಾಟ ಹಾಗೂ ಸಮಾಜಮುಖಿ ಸೇವೆಗಳನ್ನು ವಿವರಿಸಿದರು.
413 ಪೌರ ಕಾರ್ಮಿಕರಿಗೆ ಬಟ್ಟೆ ಹಾಗೂ 130 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದರು.
ಬಸವರಾಜೇಂದ್ರ ಸ್ವಾಮಿ ಸ್ವಾಗತಿಸಿದರು. ಮಾತನಾಡುವ ಗೊಂಬೆ ಖ್ಯಾತಿಯ ಸುಮಾ ರಾಜಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸುರಭಿ ಪ್ರಾರ್ಥಿಸಿದರು.
ವೇದಿಕೆಯ ಪದಾಧಿಕಾರಿಗಳಾದ ನಂಜುAಡ, ಶಿವಕುಮಾರ್, ತಾರಾ, ಹರೀಶ್, ಅಜಯ್ ಶೆಟ್ಟಿ, ವತ್ಸಲಾ, ಹರೀಶ್, ಗೀತಾ, ಕಿರಣ್, ಕರೀಗೌಡ, ಕುಮಾರಶೆಟ್ಟಿ, ಶಿವಕುಮಾರ್, ಕಿಕ್ಕೇರಿ ಕಿರಣ, ರವಿಗೌಡ, ರಶ್ಮಿಸಿಂಗ್, ಮುಂಜು ಪೇಜೂರ್, ಮಹೇಂದ್ರ, ವಿಷ್ಣು, ಈವಿ ನಾಗರಾಜು ಮೊದಲಾದವರು ಇದ್ದರು.
ಕನ್ನಡಾಂಬೆ ರಕ್ಷಣಾ ವೇದಿಕೆ ಸೇರಿದಂತೆ ಕನ್ನಡಪರ ಸಂಘಟನೆಗಳು ಭಾಷೆ, ಪರಂಪರೆ ಹಾಗೂ ಸಂಸ್ಕöÈತಿ ಉಳಿಸುವ ಕೆಲಸ ಮಾಡುತ್ತಿವೆ. ಇದು ಶ್ಲಾಘನೀಯವಾದ ಕೆಲಸ. ಕನ್ನಡವನ್ನು ಉಳಿಸುವುದು ಕೇವಲ ಅರಮನೆಯ ಜವಾಬ್ದಾರಿಯಲ್ಲ. ಸಮಸ್ತ ಕನ್ನಡಿಗರು ಕೂಡ ಇದಕ್ಕೆ ವಾರಸುದಾರರು.
• ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದರು




