ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ದಿನೇಶ್‌ಗೌಡ ನೇತೃತ್ವದಲ್ಲಿ ಅನ್ನ ಸಂತರ್ಪಣೆ ಮೂಲಕ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಮೈಸೂರು-ಕೊಡಗು ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೆ.ಆರ್.ಆಸ್ಪತ್ರೆ ಮುಂಭಾಗದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ನಿರ್ಮಿಸಿದ ಬಸ್ ನಿಲ್ದಾಣದಲ್ಲಿ ಅನ್ನ ಸಂತರ್ಪಣೆಗೆ ಚಾಲನೆ ನೀಡಿದರು.
ಬಳಿಕ ಅವರು ಮಾತನಾಡಿ, ಮೈಸೂರು ಪ್ರಾಂತ್ಯಕ್ಕೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅವೀಸ್ಮರಣೀಯ. ಸಾರ್ವಜನಿಕರು ಇದನ್ನು ನೆನಪಿಸಿಕೊಂಡು ನಗರದಲ್ಲೆಡೆ ಸೇರಿದಂತೆ ಇಡೀ ರಾಜ್ಯದಲ್ಲಿ ಅವರ ಜನ್ಮದಿನಾಚರಣೆಯನ್ನು ವಿವಿಧ ಸೇವಾ ಕಾರ್ಯಗಳ ಮೂಲಕ ಆಚರಣೆ ಮಾಡುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ನಾವೂ ಸಹ ಅದ್ದೂರಿಯಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ವಿವಿಧ ಸೇವಾ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿದ್ದೇವೆ ಎಂದರು.
ಕಾರ್ಯಕ್ರಮದ ಆಯೋಜಕರಾದ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ದಿನೇಶ್‌ಗೌಡ ಅವರು ಮಾತನಾಡಿ, ಚಾಮರಾಜ ನಗರ ವಿಧಾನಸಭಾ ಕ್ಷೇತ್ರದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಈ ನಾಡಿಗೆ ಅಪೂರ್ವವಾದ ಕೊಡುಗೆಗಳನ್ನು ನೀಡಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕಿದೆ. ಕಾಳಿದಾಸ ರಸ್ತೆ, ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಬಳಿ ಅನ್ನ ಸಂತರ್ಪಣೆ ಮಾಡಲಾಗಿದೆ, ವಿವಿಧ ಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗಿದೆ. ಯದುವೀರ್ ಅವರು ಸಂಸದರಾಗಿ ೨ ವರ್ಷ ತುಂಬಿದ ಹಿನ್ನಲೆ ಅವರನ್ನು ಗೌರವಿಸಲಾಗಿದೆ. ಯದುವೀರ್ ಅವರೂ ಸಹ ನಾಲ್ವಡಿ ಕೃಷ್ಣರಾಜ ಒಡೆಯರ್ ಅವಚರ ಹಾದಿಯಲ್ಲಿಯೇ ಸಮುದಾಯಕ್ಕೆ ಅಗತ್ಯವಾದ ಕಾರ್ಯಗಳನ್ನು ನಡೆಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನೂರಾರು ಜನರಿಗೆ ಅನ್ನ ಸಂತರ್ಪಣೆ, ಸಿಹಿ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಖಂಡರಾದ ಎಂ.ಎನ್.ಪ್ರಕಾಶ್, ಮಹೇಶ್, ಸುರೇಶ್, ರಾಮೇಗೌಡ, ಕೃಷ್ಣಮೂರ್ತಿ, ವಿನೋದ್, ನಾಗೇಶ್, ನಿಖಿಲ್, ನಾಗೇಂದ್ರ, ಪ್ರವೀಣ್, ಸುದರ್ಶನ್, ಅಭಿ ಇನ್ನಿತರರು ಇದ್ದರು.
ಮೈಸೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಕಾರ್ಖಾನೆ
ಮೈಸೂರು ಭಾಗದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದು ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಈ ಭಾಗದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಾರ್ಖಾನೆ ಸ್ಥಾಪನೆ ಮಾಡುವಂತೆ, ಸಂಸದರಾದ ಯದುವೀರ್ ಅವರ ಮೂಲಕ ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿ ಶೀಘ್ರದಲ್ಲೇ ಕಾರ್ಖಾನೆ ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಮನವಿ ಮಾಡುತ್ತೇವೆ.
ದಿನೇಶ್‌ಗೌಡ, ಬಿಜೆಪಿ ಅಧ್ಯಕ್ಷ, ಚಾಮರಾಜ ಕ್ಷೇತ್ರ



