ವರದಿ : ನಿಷ್ಕಲ ಎಸ್., ಮೈಸೂರು
ಮೈಸೂರು: ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ 23ನೇ ಪೀಠಾಧಿಪತಿಯಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 111ನೇ ಜಯಂತಿಯನ್ನು ಆ.29ರಂದು ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ತಿಳಿಸಿದರು.
ಗುರುವಾರ ಸುದ್ದಿಗೋಸ್ಠಿಯಲ್ಲಿ ಅವರು ಮಾತನಾಡಿ, ಶ್ರೀಮಠವು ಕೈಗೊಳ್ಳುತ್ತಿರುವ ಎಲ್ಲ ರೀತಿಯ ಸೇವಾ ಕಾರ್ಯಕ್ಕೆ ಭದ್ರ ಬುನಾದಿ ಹಾಕಿದ ಶ್ರೀಗಳ ಜಯಂತಿಯನ್ನು ಸಂಭ್ರಮದಿAದ ಆಚರಿಸಲಾಗುತ್ತಿದ್ದು, ಹಲವು ಜನಪರ ಕಾರ್ಯಗಳು ನಡೆಯಲಿವೆ' ಎಂದರು.
ಆಗಸ್ಟ್ 29 ರಂದು ಬೆಳಿಗ್ಗೆ 8.45ಕ್ಕೆ ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜು ಬಳಿಯಿಂದ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದವರೆಗೆ ರೋಬೊ ಆನೆಯ ಮೇಲೆ ರಾಜೇಂದ್ರ ಶ್ರೀಗಳ ಪುತ್ಥಳಿಯನ್ನು ಮೆರವಣಿಗೆ ಮಾಡಲಾಗುವುದು. 10.30ಕ್ಕೆ ಮಠದ ಆವರಣದಲ್ಲಿ ವೇದಿಕೆ ಸಮಾರಂಭ ನಡೆಯಲಿದೆ' ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿ
`ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅವಧೂತ ದತ್ತಪೀಠದ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ, ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸುವರು' ಎಂದು ಹೇಳಿದರು.
`ಅತಿಥಿಗಳಾಗಿ ಶಾಸಕರಾದ ಅನಿಲ್ ಚಿಕ್ಕಮಾದು, ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಣ್, ಜಿ.ಡಿ.ಹರೀಶ್ ಗೌಡ, ಎಂಎಲ್‌ಸಿಗಳಾದ ಡಾ.ಡಿ.ತಿಮ್ಮಯ್ಯ, ಮಧು ಜಿ.ಮಾದೇಗೌಡ, ಸಿ.ಎನ್.ಮಂಜೇಗೌಡ, ಕೆ.ವಿವೇಕಾನಂದ, ಕೆ.ಶಿವಕುಮಾರ್, ರಘು ಕೌಟಿಲ್ಯ ಭಾಗವಹಿಸುವರು' ಎಂದರು.
`ನೇತ್ರ, ರಕ್ತ, ಅಂಗಾAಗಗಳು ಮತ್ತು ದೇಹ ದಾನದ ಕುರಿತು ಮಾಹಿತಿ ನೀಡಲಾಗುವುದು. ನೋಂದಣಿಗೂ ಅವಕಾಶ ಕಲ್ಪಿಸಲಾಗಿದೆ' ಎಂದು ತಿಳಿಸಿದರು.
ಜೆಎಸ್‌ಎಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ 115 ಮಂದಿಗೆ, ಕೆಲಸದಿಂದ ಬಿಡುಗಡೆ ಪಡೆದ 51 ಮಂದಿಯನ್ನು ಮಧ್ಯಾಹ್ನ 3ಕ್ಕೆ ಅಭಿನಂದನೆ ಸಲ್ಲಿಸಲಾಗುವುದು. ಜೆಎಸ್‌ಎಸ್ ವಿದ್ಯಾಸಂಸ್ಥೆಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು.
ಜೆಎಸ್‌ಎಸ್ ಮಹಾವೀದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಶಿವಕುಮಾರಸ್ವಾಮಿ, ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ಉಪ ನಿರ್ದೇಶಕ ನಿರಂಜನಮೂರ್ತಿ ಪಾಲ್ಗೊಂಡಿದ್ದರು.
‘ಸೈನ್ಸ್ ಆನ್ ವೀಲ್ಸ್’ ಈ ಬಾರಿಯ ವಿಶೇಷ
`ಈ ಬಾರಿಯ ವಿಶೇಷವಾದ ಜೆಎಸ್‌ಎಸ್ ವಿಜ್ಞಾನ ವಾಹಿನಿ (ಸೈನ್ಸ್ ಆನ್ ವೀಲ್ಸ್)ಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಚಾಲನೆ ನೀಡುವರು. `ರಾಜೇಂದ್ರ ನುಡಿನಮನ' ಕೃತಿಯ 2ನೇ ಆವೃತ್ತಿಯನ್ನು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, `ಪ್ರಸಾದ' ವಿಶೇಷ ಸಂಚಿಕೆಯನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜೆಎಸ್‌ಎಸ್ ಮಾಸ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಸಂಸದ ಸುನೀಲ್ ಬೋಸ್, `ನಮ್ಮೊಡನಿದ್ದ ದೈವ ಪೂಜ್ಯ ರಾಜೇಂದ್ರ ಶ್ರೀ' ಕೃತಿಯನ್ನು ಶಾಸಕ ಡಾ.ಎಚ್.ಸಿ. ಮಹದೇವಪ್ಪ, `ಮ್ಯಾನ್ ವಿಥ್ ಡಿವೈನಿಟಿ ಪೂಜ್ಯ ರಾಜೇಂದ್ರ ಶ್ರೀ' ಇಂಗ್ಲಿಷ್ ಕೃತಿಯನ್ನು ಪಶುಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ ಬಿಡುಗಡೆ ಮಾಡುವರು' ಎಂದು ಬೆಟಸೂರಮಠ ತಿಳಿಸಿದರು.
`ಜೆಎಸ್‌ಎಸ್ ಶಾಲಾ-ಕಾಲೇಜುಗಳ ಉತ್ತಮ ವಾರ್ಷಿಕ ಸಂಚಿಕೆಗಳಿಗೆ ಹಾಗೂ ಪ್ರಸಾದ ಮಾಸಿಕ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಲಾಗುವುದು. ಜೆಎಸ್‌ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದಿAದ ಹಾಸ್ಟೆಲ್‌ಗಳ ಪ್ರತಿಭಾನ್ವಿತರಿಗೆ ವಿದ್ಯಾರ್ಥಿವೇತನ ನೀಡಲಾಗುವುದು' ಎಂದು ಬೆಟಸೂರಮಠ ತಿಳಿಸಿದರು.
`ಮಹಾವಿದ್ಯಾಪೀಠದ ಎಲ್ಲ ಅಂಗಸAಸ್ಥೆಗಳು, ವಿವಿಧ ಸಂಘಸAಸ್ಥೆಗಳು ಹಾಗೂ ಸಾರ್ವಜನಿಕರಿಂದ ವಿವಿಧೆಡೆ ಜಯಂತಿ ಆಚರಿಸಲಾಗುವುದು. ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ರೋಗಿಗಳಿಗೆ ಹಣ್ಣು ವಿತರಣೆ, ಶಾಲಾ ಕಾಲೇಜುಗಳಲ್ಲಿ ಸಸಿ ನೆಡುವುದು, ವಿಚಾರಸಂಕಿರಣ, ಕ್ರೀಡಾಕೂಟ, ಪುಸ್ತಕಗಳು, ನೋಟ್‌ಪುಸ್ತಕಗಳು, ಶಾಲಾ ಬ್ಯಾಗ್‌ಗಳು, ಸಮವಸ್ತçಗಳ ವಿತರಿಸಲಾಗುವುದು' ಎಂದರು.
